News Karnataka Kannada
Monday, May 06 2024
ಉತ್ತರಕನ್ನಡ

ಕಾರವಾರ: ಯೋಜನೆಗಳ ಪ್ರಯೋಜನ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕು ಎಂದ ರೂಪಾಲಿ ನಾಯ್ಕ

Karwar: Rupali Naik says benefits of schemes should reach the last person
Photo Credit : By Author

ಕಾರವಾರ: ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕು ಎಂಬುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಶಯವಾಗಿದೆ ಎಂದು ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.

ಕಾರವಾರ ತಾಲ್ಲೂಕಿನ ಮಲ್ಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರೂರು ಗ್ರಾದ 86 ಜನರಿಗೆ ಉಜ್ವಲ ಯೋಜನೆಯಡಿ ಅಡುಗೆ ಅನಿಲದ ಸಂಪರ್ಕವನ್ನು ಕಲ್ಪಿಸಿ ಸಿಲಿಂಡರ್‌ಮತ್ತು ಒಲೆಯನ್ನು ವಿತರಿಸಿ ಅವರು ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟಿಗೆ ಒಲೆ ಹೊಗಲಾಡಿಸಿ ಪ್ರತಿ ಮನೆಯೂ ಹೊಗೆ ಮುಕ್ತ ಮನೆಯಾಗಬೇಕು ಎಂದು ಉಜ್ವಲ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಸಮಾಜದ ಕಡೆಯ ವ್ಯಕ್ತಿಗೂ ಇಂತಹ ಯೋಜನೆಯ ಲಾಭ ತಲುಪಬೇಕು ಎಂಬುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಶಯವಾಗಿದೆ. ಈ ಯೋಜನೆಯನ್ನು ತಲುಪಿಸಿರುವುದಕ್ಕೆ ಸಂತಸವಾಗುತ್ತಿದೆ. ಇದು ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ ಎಂದರು.

ದಶಕಗಳಿಂದ ಈ ಭಾಗದ ಜನರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿರುವುದನ್ನು ಕಂಡು ಮನಸ್ಸಿಗೆ ಬೇಸರವಾಗಿತ್ತು. ಮುಂದಿನ ದಿನಗಳಲ್ಲಿ ಇಲ್ಲಿಯ ಸಮಸ್ಯೆ ಪರಿಹಾರಕ್ಕೆ ಶಕ್ತಿಮೀರಿ ದುಡಿಯುತ್ತೇನೆ. ನಿಮ್ಮ ಬೆನ್ನೆಲುಬಾಗಿ ಕೆಲಸ ಮಾಡುತ್ತೇನೆ. ಯಾವುದೇ ಸಮಸ್ಯೆ ಇದ್ದರೂ ಬಂದು ಬಗೆ ಹರಿಸಿಕೊಳ್ಳಬಹುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ ಗುನಗಿ, ಗ್ರಾಮ ಪಂಚಾಯತಿ ಸದಸ್ಯರಾದ ದತ್ತಾರಾಮ‌ಬಾಂದೇಕರ, ಸುಜಾತಾ ಕುಣಬಿ, ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು, ಬೂತ್‌ಪ್ರಮುಖರು, ಊರಿನ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು