News Karnataka Kannada
Monday, May 06 2024
ಉತ್ತರಕನ್ನಡ

ಕಾರವಾರ: ಇದೊಂದು ಅತ್ಯುತ್ತಮ ಬಜೆಟ್ ಎಂದ ರೂಪಾಲಿ ಎಸ್.ನಾಯ್ಕ

Rupali S Naik says it is the best budget
Photo Credit : By Author

ಕಾರವಾರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಜೆಟ್ ಶ್ರಮಿಕ ವರ್ಗ ಹಾಗೂ ಮಧ್ಯಮ ವರ್ಗದ ಪರವಾಗಿದ್ದು, ಇದೊಂದು ಜನಪರ ಬಜೆಟ್ ಆಗಿದೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಜೆಟ್ ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಕೊಡುಗೆ ನೀಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಿರುವುದು ವಿಶೇಷವಾಗಿದೆ. ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕೃಷಿ ಕ್ಷೇತ್ರದಲ್ಲಿ ಹೊಸ ಸ್ಟಾರ್ಟ ಅಪ್ ಸೃಷ್ಟಿಗೆ ಉತ್ತೇಜನ, 20 ಲಕ್ಷ ಕೋಟಿ ರೂ. ಕೃಷಿ ಸಾಲ ವಿತರಣೆಯ ಗುರಿ, ಪ್ರಧಾನ ಮಂತ್ರಿ ವಸತಿ ಯೋಜನೆಗೆ 70 ಸಾವಿರ ಕೋಟಿ ರೂ. ಮೀಸಲಿಟ್ಟಿರುವುದು ಗಮನಾರ್ಹವಾಗಿದೆ.

7 ಲಕ್ಷ ರೂ.ಗಳ ತನಕದ ಆದಾಯಕ್ಕೆ ತೆರಿಗೆ ಇಲ್ಲ. ತೋಟಗಾರಿಕೆಗೆ 2.200 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ 6 ಸಾವಿರ ಕೋಟಿ ರೂ. ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಕ್ಷೇತ್ರಕ್ಕೆ 20 ಲಕ್ಷ ಕೋಟಿ ರೂ. ತೋಟಗಾರಿಕೆಗೆ .2.200 ಕೋಟಿ ರೂ. ಹಂಚಿಕೆ. ಕೃಷಿ ಕ್ಷೇತ್ರದಲ್ಲಿ ಹೊಸ ಸ್ಟಾರ್ಟ್ ಅಪ್ ಸೃಷ್ಟಿಗೆ ಉತ್ತೇಜನ, 20 ಲಕ್ಷ ಕೋಟಿ ರೂ. ಕೃಷಿ ಸಾಲ ವಿತರಣೆ ಗುರಿ, ಪ್ರಧಾನ ಮಂತ್ರಿ ವಸತಿ ಯೋಜನೆಗೆ 70 ಸಾವಿರ ಕೋಟಿ ರೂ. ನೀಡಲಾಗಿದೆ. ಶೇ.7.5 ಬಡ್ಡಿಯೊಂದಿಗೆ ಗರಿಷ್ಠ 2 ಲಕ್ಷ ರೂ. ತನಕ ಠೇವಣಿ ಮಾಡಲು ಮಹಿಳಾ ಸಮ್ಮಾನ್ ಯೋಜನೆಯಡಿ ಅವಕಾಶ ಒದಗಿಸಲಾಗಿದೆ.

ಇಂತಹ ಜನಪರ ಬಜೆಟ್ ನೀಡಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು