ಕಾರವಾರ: ಕದಂಬ ನೌಕಾನೆಲೆ ಹಿರಿಯ ಅಧಿಕಾರಿಗಳಿಂದ ಮೀನುಗಾರರೊಂದಿಗೆ ಸಮಾಲೋಚನಾ ಸಭೆ

ಕಾರವಾರ: ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರ ಮೇಲೆ ಭಾರತೀಯ ನೌಕಾಸೇನೆ ಗಸ್ತು ಸಿಬ್ಬಂದಿಯಿಂದ ತೊಂದರೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕದಂಬ ನೌಕಾನೆಲೆ ಹಿರಿಯ ಅಧಿಕಾರಿಗಳು ಯುವ ಮೀನುಗಾರರ ಸಂಘರ್ಷ ಸಮಿತಿ ಅಧ್ಯಕ್ಷ ವಿನಾಯಕ ಹರಿಕಂತ್ರ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಇಲ್ಲಿನ ಕದಂಬ ನೌಕಾನೆಲೆ ಕಚೇರಿಯಲ್ಲಿ ಸಭೆ ನಡೆಯಿತು. ಕಾರವಾರ, ಅಂಕೋಲಾ ಭಾಗದಲ್ಲಿ ಅರಬ್ಬಿ ಸಮುದ್ರದಲ್ಲಿ ನೌಕಾನೆಲೆ ಗಸ್ತು ಸಿಬ್ಬಂದಿಯು ಮೀನುಗಾರರ ಬಲೆ ಕತ್ತರಿಸುವುದು, ವೇಗದ ಬೋಟಿನ ಮೂಲಕ ಅಲೆ ಎಬ್ಬಿಸಿ ಭಯ ಬೀಳುಸಿದ ಘಟನೆ ನಡೆದಿತ್ತು. ಅದನ್ನು ಖಂಡಿಸಿ ಯುವ ಮೀನುಗಾರರ ಸಂಘರ್ಷ ಸಮಿತಿಯು ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿತ್ತು. ಮನವಿ ಆಧರಿಸಿ ನೌಕಾನೆಲೆಯ ಅಧಿಕಾರಿಗಳು ಸಮಾಲೋಚನೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ ಎಂದು ಯುವ ಮೀನುಗಾರರ ಸಂಘರ್ಷ ಸಮಿತಿ ಅಧ್ಯಕ್ಷ ವಿನಾಯಕ ಹರಿಕಂತ್ರ ತಿಳಿಸಿದರು.

ನೌಕಾನೆಲೆ ಪ್ರದೇಶದಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧ ಇದೆ. ಹಾಗಾಗಿ ಹತ್ತಿರದಲ್ಲಿ ಮೀನುಗಾರಿಕೆ ಮಾಡಬಾರದು. ಭದ್ರತೆ ದೃಷ್ಟಿಯಿಂದ ಇದು ಅನಿವಾರ್ಯ ಎಂದು ನೌಕಾನೆಲೆ ಅಧಿಕಾರಿಗಳು ಸಮಜಾಯಿಷಿ ನೀಡಿದರು.

ನೌಕಾನೆಲೆ ಸಮುದ್ರ ಗಡಿಯ ಗುರುತು ಪ್ರದೇಶಕ್ಕೂ ಬೋಟಿನಲ್ಲಿ ಹೋಗಿ ವಿವರಣೆ ನೀಡಿದ್ದಾರೆ. ಕರಾವಳಿ ಕಾವಲು ಪಡೆಯ ಕಾರವಾರ ಠಾಣೆ ಇನ್ಸ್ಪೆಕ್ಟರ್ ನಿಶ್ಚಲಕುಮಾರ ಕೂಡ ಇದ್ದರು. ಸ್ಥಳ ಭೇಟಿ ಬಳಿಕ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಹಲವು ವಿಚಾರ ಚರ್ಚೆಯಾಗಿದೆ. ಅಂತಿಮವಾಗಿ ಸ್ಥಳೀಯ ಮೀನುಗಾರರ ಸಮಸ್ಯೆಯನ್ನೂ ಆಲಿಸಲು ಅಧಿಕಾರಿಗಳು ಒಪ್ಪಿದರು ಎಂದು ಮಾಹಿತಿ ನೀಡಿದರು.

ಕದಂಬ ನೌಕಾನೆಲೆಯಲ್ಲಿ ವಿಕ್ರಮಾದಿತ್ಯ ನೌಕೆ ಸೇರಿ ದೇಶದ ಅನೇಕ ನೌಕೆಗಳು ಇರುವುದರಿಂದ ಭದ್ರತೆಗೆ ಹೆಚ್ಚು ಆದ್ಯತೆ ನೀಡಬೇಕಾಗುತ್ತದೆ. ನೌಕಾನೆಲೆ ಸಮುದ್ರ ಗಡಿಯಿಂದ ಒಂದು ಕಿ.ಮೀ. ದೂರದಲ್ಲಿ ಮೀನುಗಾರರು ಮೀನುಗಾರಿಕೆ ನಡೆಸಬೇಕು. ಗಡಿಯ ಹತ್ತಿರವೂ ಬರಬಾರದು. ಅದರಿಂದ ಭದ್ರತೆಗೆ ತೊಂದರೆ ಆಗುತ್ತದೆ ಎಂದು ನೌಕಾನೆಲೆ ಅಧಿಕಾರಿಗಳು ವಿವರಿಸಿದರು. ಭದ್ರತೆ ವಿಚಾರ ಏನೇ ಇದ್ದರೂ, ಅದರಿಂದ ಮೀನುಗಾರರಿಗೆ ತೊಂದರೆ ಆಗಬಾರದು.

ಸಮುದ್ರದಲ್ಲಿ ಹೆಚ್ಚಿನ ಮೀನು ಸಿಗುವ ಸ್ಥಳವೇ ಕಾರವಾರ, ಅಂಕೋಲಾ ಭಾಗದಲ್ಲಿದೆ. ಗಡಿಯಿಂದ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಮೀನುಗಾರರು ಬರಬಾರದು ಎಂದರೆ, ಮೀನು ಹಿಡಿಯುವುದಾದರೂ ಎಲ್ಲಿ? ಇದು ಸರಿಯಾದ ಕ್ರಮ ಅಲ್ಲ. ಮೀನುಗಾರರ ಸಮಸ್ಯೆ ಕೂಡ ಕೇಳಿ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯುವುದು ಉತ್ತಮ ಎಂದು ಸಲಹೆ ನೀಡಿದ್ದೇನೆ. ಅದಕ್ಕೆ ನೌಕಾನೆಲೆ ಅಧಿಕಾರಿಗಳು ಒಪ್ಪಿದ್ದಾರೆ ಎಂದು ವಿನಾಯಕ ಹರಿಕಂತ್ರ ತಿಳಿಸಿದರು. ಮೀನುಗಾರ ಮುಖಂಡರಿಗಿಂತ ಹೆಚ್ಚಾಗಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುವ ಮೀನುಗಾರರ ಸಮಸ್ಯೆ ಕೇಳಲು ಹೇಳಿದ್ದೇನೆ. ಒಂದು ವಾರದ ನಂತರ ಪ್ರತಿ ಊರಿನಿಂದ ಐವರು ಮೀನುಗಾರರ ಜೊತೆ ಸಭೆ ನಡೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವಿನಾಯಕ ತಿಳಿಸಿದರು.

Ashika S

Recent Posts

ವಾಕಿಂಗ್ ಗೆ ಹೋದ ಪೊಲೀಸ್‌ ಕಾನಸ್ಟೇಬಲ್‌ ನಾಪತ್ತೆ

ವಾಕಿಂಗ್ ಮಾಡಲು ಹೋಗಿದ್ದ ಪೊಲೀಸ್‌ ಕಾನಸ್ಟೇಬಲ್‌ ಒಬ್ಬರು ವಾಪಾಸ್ ಮನೆಗೆ ಬಾರದೇ ಕಾಣೆಯಾಗಿರುವ ಘಟನೆ ಏಪ್ರಿಲ್ 24 ರಂದು ನಡೆದಿದ್ದು,…

1 min ago

ಸುನೀಲ್ ಬೋಸ್ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ : ಮಾಜಿ ಶಾಸಕ ಆರ್ ನರೇಂದ್ರ

ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರು ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಜಯಗಳಿಸಲಿದ್ದಾರೆ ಎಂದು…

16 mins ago

ಸೈಕಲ್​ ಗೆ ಪಿಕಪ್ ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದೊಯ್ದ ಡ್ರೈವರ್

ಸೈಕಲ್​ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಕಪ್​ ವಾಹನವೊಂದು ಡಿಕ್ಕಿ ಹೊಡೆದು 2 ಕಿಲೋ ಮೀಟರ್​ವರೆಗೆ ಎಳೆದುಕೊಂಡು ಹೋಗಿರುವ ಘಟನೆ ಹರಿಯಾಣದ ಸಿರ್ಸಾದ…

29 mins ago

ಕೊಪ್ಪಳದಲ್ಲಿ ಒಂದೇ ದಿನ ತಂದೆ ಮಗ ಮೃತ್ಯು

ತಂದೆ ಮಗ ಒಂದೇ ದಿನ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ.

49 mins ago

ಬರ ಪರಿಹಾರ : ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಎಂದ ಆರ್‌ ಅಶೋಕ್‌

ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಸಮರ ನಡೆಯುತ್ತಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ…

1 hour ago

ನೆರೆಮನೆಯ ಕಾರಿನ ಗ್ಲಾಸ್‌ ಪುಡಿ ಮಾಡಿದ ಶಿಕ್ಷಕಿ: ದೂರು ದಾಖಲು

ಶಿಕ್ಷಕಿಯೊಬ್ಬಳು ನೆರೆಮನೆಯವರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಕಿಟಕಿ ಗ್ಲಾಸ್‌ ಒಡೆದಿರುವ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

2 hours ago