ಕಾರವಾರ: ತಹಸೀಲ್ದಾರ್ ಕಚೇರಿಯಲ್ಲಿ ಸರ್ವರ್ ಸಮಸ್ಯೆ – ಜನರ ಪರದಾಟ

ಕಾರವಾರ: ನಗರದ ತಹಸೀಲ್ದಾರ್ ಕಚೇರಿಯಲ್ಲಿ ಕಳೆದ ಅನೇಕ ದಿನಗಳಿಂದ ಸರ್ವರ್ ಸಮಸ್ಯೆ ಸರಕಾರದಿಂದ ಬರುವಂಥ ಸವಲತ್ತುಗಳಿಂದ ಜನರು ವಂಚಿತರಾಗುತ್ತಿದ್ದಾರೆ. ಇದರಿಂದ ತಾಲೂಕಿನ ವಿವಿಧ ಕಡೆಗಳಿಂದ ಬಂದು ವಾಪಸ್ ಹೋಗುವಂಥ ಸ್ಥಿತಿ ನಿರ್ಮಾಣವಾಗಿದ್ದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿನ ಜಿಎಸ್‌ಸಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿ ತಿದ್ದುಪಡಿಗೆ ತಿಂಗಳುಗಟ್ಟಲೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಹೊಸ ಪಡಿತರ ಚೀಟಿ ಪಡೆಯಲು ಚೀಟಿಯಲ್ಲಿನ ಹೆಸರು ಸೇರ್ಪಡೆ, ಹೆಸರು ತೆಗೆಯುವುದು, ವಿಳಾಸ ಬದಲಾವಣೆ, ಹೆಸರು ತಿದ್ದುಪಡಿ, ನ್ಯಾಯಬೆಲೆ ಅಂಗಡಿ ಬದಲಾವಣೆ ಸೇರಿದಂತೆ ಇತ್ಯಾದಿ ಸೇವೆಯನ್ನು ಪಡೆಯಲು ಕಾರವಾರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಿತ್ಯವೂ ಅರ್ಜಿ ಸಲ್ಲಿಸಲಾಗುತ್ತಿದೆ. ಆದರೆ ಕಳೆದ ಸುಮಾರು ಒಂದುವರೆ ತಿಂಗಳುಗಳಿದ ಇಲಾಖೆಯಲ್ಲಿನ ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ವಿಲೇವಾರಿಯಾಗದೆ ಜನರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ತಿಂಗಳ ಹಿಂದೆ ಬಿಪಿಎಲ್ ಕಾರ್ಡ್ ಗೆ ಹೆಸರು ಸೇರ್ಪಡೆ ಮಾಡಲು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದೇನೆ. ಆದರೆ ಹೆಸರು ಸೇರ್ಪಡೆಗೆ ತಹಸೀಲ್ದಾರ್ ಕಚೇರಿಗೆ ಮೂರು ಬಾರಿ ಬಂದರೂ ನೆಟ್ವರ್ಕ್ ಸಮಸ್ಯೆ ಎಂದು ವಾಪಸ್ಸ್ ಕಳುಹಿಸಿದ್ದಾರೆ. ದುಡಿದು ತಿನ್ನುವ ನಮಗೆ ಇಷ್ಟು ಸಣ್ಣ ಕೆಲಸಕ್ಕೆ ಹೀಗೆ ಅಲೆದಾಡಿಸಿದರೆ ಹೇಗೆ. ಅಧಿಕಾರಿಗಳು ಈ ಬಗ್ಗೆ ಕೂಡಲೇ ಕ್ರಮವಹಿಸಿ ತಕ್ಷಣ ಹೆಸರು ಸೇರ್ಪಡಿಸುವಂತೆ ಸ್ಥಳೀಯರಾದ ದೇವಿದಾಸ್ ವೈಂಗಣಕರ್ ಆಗ್ರಹಿಸಿದ್ದಾರೆ.

ಕಾರವಾರ ತಹಸೀಲ್ದಾರ ಕಚೇರಿಯೊಂದರಲ್ಲಿಯೇ ಸುಮಾರು 400 ಕ್ಕೂ ಹೆಚ್ಚು ಅರ್ಜಿಗಳು ಸರ್ವರ್ ಸಮಸ್ಯೆಯಿಂದಾಗಿ ವಿಲೇವಾರಿಯಾಗದೆ ಬಾಕಿ ಉಳಿದುಕೊಂಡಿದೆ. ಅಲ್ಲದೆ ನಿತ್ಯ 50ಕ್ಕೂ ಹೆಚ್ಚು ಜನರು ತಿದ್ದುಪಡಿಗಾಗಿ ಕಾದು ಸುಸ್ತಾಗಿ ವಾಪಸ್ಸ್ ತೆರಳುತ್ತಿದ್ದಾರೆ. ಇನ್ನು ಕೆಲವರು ವೈದ್ಯಕೀಯ ಚಿಕಿತ್ಸೆಗೆ, ಹೆರಿಗೆ ಸೇರಿದಂತೆ ಇನ್ನಿತರ ಕಾರಣಕ್ಕೆ ಹೆಸರು ಸೇರ್ಪಡೆ ಮಾಡಿ ತುರ್ತು ಸೌಲಭ್ಯಕ್ಕಾಗಿ ಕಾಯುತ್ತಿರುವವರು ಕಚೇರಿಗೆ ಅಲೆದು ಸುಸ್ತಾಗುವಂತಾಗಿದೆ.

ಸಕಾಲದಲ್ಲಿ ಅರ್ಜಿ ವಿಲೇವಾರಿಗೆ ಕೇವಲ ಎರಡು ಗಂಟೆ ಮಾತ್ರ ನೀಡುತ್ತಿದ್ದು, ಏಕಕಾಲದಲ್ಲಿ ರಾಜ್ಯದಾದ್ಯಂತ ಎಲ್ಲರೂ ಕೆಲಸ ಮಾಡುವ ಕಾರಣ ಸಮಸ್ಯೆಯಾಗುತ್ತಿದೆ. ನಿತ್ಯ ಒಂದರಿದ ಎರಡು ಅರ್ಜಿ ಮಾತ್ರ ವಿಲೇವಾರಿ ಮಾಡಲು ಸಾಧ್ಯವಾಗಿದೆ. ಜನ ನಮ್ಮೊಂದಿಗೆ ಜಗಳವಾಡುತ್ತಾರೆ ರೇಗಾಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎನ್ನುತ್ತಾರೆ ಇಲ್ಲಿನ ಸಿಬ್ಬಂದಿಗಳು. ಕಳೆದ ಸಾಕಷ್ಟು ದಿನಗಳಿಂದ ವೃದ್ದರು, ಗರ್ಭಿಣಿಯರು ಸೇರಿದಂತೆ ನಿತ್ಯ ನೂರಾರು ಜನರು ತಹಸೀಲ್ದಾರ್ ಕಚೇರಿಗೆ ಬಂದು ವಾಪಸ್ ಹೋಗುತ್ತಿದ್ದಾರೆ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ತಹಸೀಲ್ದಾರ್ ಕಚೇರಿಗೆ ಬಂದು ಹೋಗುರುವುದು ತೊಂದರೆ ಇಲ್ಲ.

ಆದರೆ ಬಂದಾಗಲೆಲ್ಲ ಕೇಲಸ ಆಗುತ್ತಿಲ್ಲ. ತಮ್ಮ ದೂರದಿಂದ ಬರುವವರು ತಮ್ಮ ದಿನಪೂರ್ತಿಯ ಕೆಲಸ ಕಾರ್ಯಗಳನ್ನು ಬಿಟ್ಟು ಬರಬೇಕಾಗುತ್ತಿದೆ ಎನ್ನುವುದ ಜನರ ಆಕ್ಷೇಪವಾಗಿದೆ. ಕಾರವಾರ ಗ್ರೇಡ್ 2 ತಹಸೀಲ್ದಾರ್ ಶ್ರೀದೇವಿ ಭಟ್ ಹೇಳುವಂತೆ ಪಡಿತರ ಚೀಟಿ ಆನ್ ಲೈನ್ ವ್ಯವಸ್ಥೆಯನ್ನು ಎನ್‌ಐಸಿ ಕಂಪೆನಿ ಗುತ್ತಿಗೆ ಪಡೆದಿದ್ದು ಅದು ನಿರ್ವಹಣೆ ಮಾಡುತ್ತಿದ್ದ ಕಾರಣ ಕೆಲ ಗಂಟೆಗಳು ಮಾತ್ರ ಕೆಲಸಕ್ಕೆ ಅವಕಾಶ ನೀಡಿತ್ತು. ಇದರಿಂದ ಕೆಲವೇ ಅರ್ಜಿಗಳು ಮಾತ್ರ ವಿಲೇವಾರಿಯಾಗಿದೆ. ಆದರೆ ಕೆಲ ಅರ್ಜಿಗಳನ್ನು ಪಡೆದಿದ್ದು ಇನ್ನೊಂದು ವಾರದಲ್ಲಿ ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಿ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

1 hour ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

2 hours ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

2 hours ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

3 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

3 hours ago