ಕಾರವಾರ: ಸಿಬ್ಬಂದಿ ವೇತನ ಪಾವತಿಗೆ ಕ್ರಮ ಕೈಗೊಳ್ಳಬೇಕು- ಡಿ.ಎಂ ಜಕ್ಕಪ್ಪಗೋಳ್

ಕಾರವಾರ: ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಿಬ್ಬಂದಿಗಳ ವೇತನವನ್ನು ನೀಡಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ನ ಅಭಿವೃದ್ಧಿ ವಿಭಾಗದ ಉಪಕಾರ್ಯದರ್ಶಿ ಡಿ. ಎಮ್ ಜಕ್ಕಪ್ಪಗೋಳ್ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶಿರಸಿ ತಾಲೂಕು ಪಂಚಾಯತ್ ನಲ್ಲಿ ಶನಿವಾರ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಗ್ರಾಮ ಪಂಚಾಯತ್ ದಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ಪಡೆದು ಅವರಿಗೆ ಸಂಬಳ ಪಾವತಿಯಾಗದಿರುವ ಹಿನ್ನೆಲೆಯಲ್ಲಿ ಆಯಾ ಪಂಚಾಯತ್ ನ ಅಧಿಕಾರಿಗಳು ಪರಿಹಾರ ಕಂಡುಕೊಳ್ಳಲು ಮುಂದಾಗಬೇಕಿದೆ ಎಂದರು.

ನರೇಗಾ ಯೋಜನೆಯಡಿ ಹೆಚ್ಚಿನ ಪ್ರಮಾಣದಲ್ಲಿ ವೈಯಕ್ತಿಕ ಹಾಗೂ ಸಾಮುದಾಯಿಕ ಕಾಮಗಾರಿಗಳನ್ನು ಕೈಗೊಂಡು ಮಾನವದಿನಗಳ ಸೃಜನೆ ಹೆಚ್ಚಿಸಬೇಕು ಎಂದರು. ಇನ್ನು ಮನೆ ಪರಿಷ್ಕರಣೆ, ಎಸ್ ಎಚ್. ಜಿ. ಶೆಡ್, ಆಧಾರ್ ನೋಂದಣಿ, ನರ್ಸರಿ, ಪೌಷ್ಟಿಕ ಕೈತೋಟ, ಅಮೃತ ಗ್ರಾಮ, ಹೆಸ್ಕಾಂ ಬಿಲ್ ವಿಷಯಗಳ ಕುರಿತು ಚರ್ಚಿಸಿದರು. ಇದಕ್ಕೂ ಮುಂಚೆ ಅಂಡಗಿ ಹಾಗೂ ಬದನಗೋಡ ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿ ಸಿಬ್ಬಂದಿ ವೇತನ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ದೇವರಾಜ್ ಹಿತ್ತಲಕೊಪ್ಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

Ashika S

Recent Posts

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

4 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

14 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

29 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

44 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

45 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago