ಕಾರವಾರ: ಜಿಲ್ಲೆಯಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಉಲ್ಬಣವಾಗಿರುದರಿಂದ ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜ.೩೧ ರವರೆಗೆ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರುಗಳ ಜಾತ್ರೆ ಮತ್ತು ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಆದೇಶವು ಸಾಮೂಹಿಕ ಜಾನುವಾರುಗಳು ಸೇರುವಂತಹ ಜಾನುವಾರು ಸಂತೆ, ಜಾನುವಾರುಗಳ ಜಾತ್ರೆ ಮತ್ತು ಸಾಗಾಣಿಕೆಗೆ ಮಾತ್ರ ಅನ್ವಯ ಆಗುತ್ತಿದ್ದು, ಇದನ್ನು ಹೊರತುಪಡಿಸಿ ಬೇರೆ ಯಾವ ಉದ್ದೇಶಕ್ಕೂ ಅನ್ವಯಿಸುವುದಿಲ್ಲ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ ೧೮೮ ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.