News Karnataka Kannada
Monday, May 06 2024
ಉತ್ತರಕನ್ನಡ

ಕಾರವಾರ: ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ: ಪಾದಯಾತ್ರೆ ವಾಪಸ್

Karwar (1)
Photo Credit : By Author

ಕಾರವಾರ: ಜಿಲ್ಲೆಯಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರೋಗ್ಯ ಸಚಿವ ಡಾ. ಕೆ ಸುಧಾಕರ ಅವರು ಕ್ರಮಕೈಗೊಳ್ಳುವುದಾಗಿ ಸೂಚಿಸಿದ ಹಿನ್ನಲೆಯಲ್ಲಿ ಹೊನ್ನಾವರದವರಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ತಾತ್ಕಾಲಿಕವಾಗಿ ಹೋರಾಟ ಸ್ಥಗಿತ ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರಾಘುನಾಯ್ಕ ಹೇಳಿದರು.

ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಧಾಕರ್ ಅವರು ಕುಮಟಾದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಭರವಸೆ ನೀಡಿದ್ದು ಅವರ ಮಾತಿನಲ್ಲಿ ವಿಶ್ವಾಸವಿದೆ. ಅಲ್ಲದೆ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಮೇಲ್ದರ್ಜೆಗೇರಿಸುವ ಭರವಸೆ ನೀಡಿದ್ದಾರೆ.

ಇದರಿಂದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸಂಬಂಧದ ಪಾದಯಾತ್ರೆ ಹೋರಾಟ ಕೈಬಿಡಲಾಗುವುದು ಎಂದು ಹೇಳಿದರು. ಇತ್ತೀಚೆಗೆ ಕಾರವಾರ ಯುವತಿಯೋರ್ವಳು ಅಪಘಾತದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾದಾಗ ಸಮರ್ಪಕವಾಗಿ ಪ್ರಾಥಮಿಕ ಚಿಕಿತ್ಸೆ ನೀಡದ್ದಕ್ಕೆ ಯುವತಿಯ ಕೈ ಬೆರಳು ಕಟ್ ಮಾಡಲಾಗಿದೆ.

ಇಲ್ಲಿನ ವೈದ್ಯರ ನಿರ್ಲಕ್ಷ್ಯಕ್ಕೆ ಮಂಗಳೂರು ಆಸ್ಪತ್ರೆ ವೈದ್ಯರು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ನಿರ್ಲಕ್ಷ್ಯ ವಹಿಸಿದವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ವರ್ಗಾಯಿಸಲು ಪ್ರಯತ್ನಿಸಲಾಗುತ್ತಿದೆ.

ಆದರೆ ಮಟಕಾ, ಕೋಳಿ ಅಂಕ ಸೇರಿದಂತೆ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ನೀಡಿದ ಅವರು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು