News Karnataka Kannada
Friday, May 03 2024
ಉತ್ತರಕನ್ನಡ

ಕಾರವಾರ: ಅಕ್ರಮ ಮರಳುಗಾರಿಕೆ ನಡೆಸದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ ಎಂದ ಡಿಸಿ

Strict action should be taken to prevent illegal sand mining, says DC
Photo Credit : By Author

ಕಾರವಾರ: ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದರೆ ಅದನ್ನು ಕಟ್ಟುನಿಟ್ಟಾಗಿ ತಡೆಯಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ಅವರು ನಗರದ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಮರಳುಗಾರಿಕೆಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು. ಕಾನೂನು ಬಾಹಿರುವಾಗಿ ಮರಳುಗಾರಿಕೆ ನಡೆಯುತ್ತಿದ್ದು ಅದನ್ನು ತಡೆಗಟ್ಟಲು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ, ಅಕ್ರಮ ಮರಳುಗಾರಿಕೆ ತಡೆಗಟ್ಟಲು ಪೊಲೀಸ್ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಪ್ರಿಯಾಂಗಾ ಎಂ, ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್, ಹಿರಿಯ ಭೂವಿಜ್ಞಾನಿ ಆಶಾ ಎಂ.ಎಸ್, ಡಿವೈಎಸ್ಪಿ ಅರವಿಂದ ಕಲಗುಜ್ಜಿ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು