ಕಾರವಾರ: ಗೋದಾಮು ಸೀಜ್ ಮಾಡುವ ಎಚ್ಚರಿಕೆ ನೀಡಿದ ತಹಸೀಲ್ದಾರ್ ಎನ್.ಎಫ್. ನರೊನಾ

ಕಾರವಾರ:  ಅಲಿಗದ್ದಾದಲ್ಲಿರುವ ಆಹಾರ ಇಲಾಖೆಯ ಗೋದಾಮಿನಲ್ಲಿ ಅನುಮತಿ ಇಲ್ಲದೆ ಅಕ್ಕಿ, ಇತರ ಧಾನ್ಯ ಸಂಗ್ರಹಿಸಬಾರದು. ಸಂಗ್ರಹಿಸಿದರೆ ಗೋದಾಮನ್ನೇ ಸೀಜ್ ಮಾಡುವುದಾಗಿ ತಹಸೀಲ್ದಾರ್ ಎನ್.ಎಫ್. ನರೊನಾ ಎಚ್ಚರಿಸಿದ್ದಾರೆ.

ಅಲಿಗದ್ದಾ ಗೋದಾಮಿನಲ್ಲಿ ಧಾನ್ಯ ಸಂಗ್ರಹದಿಂದ ಹುಳಗಳು ಆಗಿ ಸಮೀಪದ ಮನೆಗಳಲ್ಲಿ ವಾಸಕ್ಕೆ ತೊಂದರೆ ಆಗುತ್ತಿತ್ತು. ಆ ಹಿನ್ನೆಲೆಯಲ್ಲಿ ಗೋದಾಮಿನಲ್ಲಿ ಧಾನ್ಯ ಸಂಗ್ರಹ ಮಾಡದಂತೆ ಈ ಹಿಂದೆ ಎಚ್ಚರಿಕೆ ನೀಡಲಾಗಿತ್ತು. ಆದರೂ, ಮತ್ತೆ ಧಾನ್ಯ ಸಂಗ್ರಹ ಮಾಡಿದ್ದರಿಂದ ಹುಳಗಳು ಸೃಷ್ಟಿಯಾಗಿ ಸಮೀಪದ ಮನೆಗಳನ್ನು ಆವರಿಸಿಕೊಂಡಿದೆ. ಅದರಿಂದ ಸ್ಥಳೀಯರು ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ತಹಸೀಲ್ದಾರ್ ಎನ್.ಎಫ್. ನರೊನಾ, ಗೋದಾಮಿನಲ್ಲಿ ಧಾನ್ಯ ಸಂಗ್ರಹ ಮಾಡದಂತೆ ತಾಕೀತು ಮಾಡಿದರು. ಈಗಿರುವ ಗೋಧಿ, ಅಕ್ಕಿಯನ್ನು ಭಾನುವಾರದೊಳಗೆ ಖಾಲಿ ಮಾಡಬೇಕು. ಇಲ್ಲದೇ ಇದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮತ್ತೆ ಇದೇ ಗೋದಾಮಿನಲ್ಲಿ ಧಾನ್ಯ ಸಂಗ್ರಹಿಸುವುದಾದರೆ ತಹಸೀಲ್ದಾರ ಅವರಿಂದ ಅನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದರು. ಅಲಿಗದ್ದಾದಲ್ಲಿರುವ ಗೋದಾಮಿನಲ್ಲಿ ಇಟ್ಟಿರುವ ಧಾನ್ಯದಿಂದ ಹುಟ್ಟಿಕೊಂಡ ಹುಳುಗಳು ಅಕ್ಕ-ಪಕ್ಕದ ಮನೆಯ ಊಟದ ತಟ್ಟೆಯಲ್ಲಿ ಬೀಳುತ್ತಿವೆ. ಮಕ್ಕಳ ಕಿವಿಯೊಳಗೆ ಸೇರುತ್ತಿವೆ. ಇದರ ಸಮಸ್ಯೆ ತಾಳಲಾರದೆ ಸ್ಥಳೀಯರು ಅನೇಕ ಬಾರಿ ತಾಲೂಕು ಆಡಳಿತಕ್ಕೆ ತಿಳಿಸಿದ್ದರು. ಸಮಸ್ಯೆ ಪುನರಾವರ್ತನೆ ಆಗಿದ್ದರಿಂದ ಮತ್ತೊಮ್ಮೆ ಆಕ್ರೋಶ ಹೊರಹಾಕಿದರು.

Ashika S

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

11 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

22 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

53 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago