News Karnataka Kannada
Sunday, May 05 2024
ಉತ್ತರಕನ್ನಡ

ಕಾರವಾರ: ಗ್ರಾಮೀಣ ಭಾಗದ ಜನರ ಅನುಕೂಲಕ್ಕಾಗಿ ಎಟಿಎಂ ಯಂತ್ರ ಅಳವಡಿಕೆಗೆ ಮಾತುಕತೆ

Karw
Photo Credit : By Author

ಕಾರವಾರ: ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಎಟಿಎಂ ಯಂತ್ರ ಅಳವಡಿಸುವ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಲೀಡ್ ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ಮಾತುಕತೆ ನಡೆಸಿದರು.

ಕಾರವಾರ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಕಂದಾಯ ಇಲಾಖೆಯ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿತಾಲೂಕಿನ ಗೋಪಶಿಟ್ಟಾದಲ್ಲಿ ಎಟಿಎಂ ಅವಶ್ಯಕತೆಯ ಬಗ್ಗೆ ಜನತೆ ಗಮನ ಸೆಳೆದಾಗ, ಶಾಸಕರು ದೂರವಾಣಿ ಮೂಲಕ ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ಮಾತನಾಡಿ, ಎಲ್ಲೆಲ್ಲಿ ಎಟಿಎಂ ಮಷಿನ್‌ ಅಳವಡಿಕೆ ಮಾಡಬಹುದು ಎಂದು ಪರಿಶೀಲಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಎಟಿಎಂ ಸ್ಥಾಪಿಸಿ ಸಾರ್ವಜನಿಕರಿಗೆ ಬ್ಯಾಂಕುಗಳ ವ್ಯವಹಾರಕ್ಕೆ ಅನುಕೂಲ ಕಲ್ಪಿಸುವ ಕುರಿತು ಚರ್ಚಿಸಿದರು.

ಹಿಂದಿನ ಸಾರ್ವಜನಿಕ ಅಹವಾಲು ಸ್ವೀಕಾರದಲ್ಲಿ ಸುಮಾರು 13 ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 9 ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ಕೊಂಕಣ ರೈಲು ತಮ್ಮ ಟಿಕೇಟ್‌ ಕಾಯ್ದಿರಿಸುವ ಪತ್ರಿಕೆಯಲ್ಲಿ ಕೇವಲ ಹಿಂದಿ ಹಾಗೂ ಇಂಗ್ಲೀಷ್‌ ಭಾಷೆಗಳನ್ನು ಬಳಸಿದ್ದಾರೆ. ಕರ್ನಾಟಕದಲ್ಲಿ ಕನ್ನಡವನ್ನು ಬಳಸಿ ಟಿಕೆಟ್ ಕಾಯ್ದಿರಿಸುವ ಕ್ರಮವಾಗಬೇಕು ಎಂದು ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಉತ್ತರಿಸಿ ಕ್ರಮ ಕೈಗೊಳ್ಳುವ ಕುರಿತು ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷರಾದ ಪಿ.ಪಿ‌.ನಾಯ್ಕ, ತಹಶೀಲ್ದಾರ ಎನ್‌.ಎಫ್‌. ನರೋನ, ಪೌರಾಯುಕ್ತರಾದ ಆರ್.ಪಿ.ನಾಯ್ಕ, ಪಿಡಬ್ಲುಡಿ ಎಇಇ, ಕಂದಾಯ ಇಲಾಖೆ ಸಿಬ್ಬಂದಿ, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷರಾದ ಸುಭಾಷ ಗುನಗಿ, ಮುಖಂಡರಾದ ರಾಜೇಶ ನಾಯ್ಕ, ಸಾರ್ವಜನಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು