ಕಾರವಾರ: ಜಿಲ್ಲೆಯ ನಾಲ್ಕು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್

ಕಾರವಾರ: ವಿಧಾನಸಭೆ ಚುಣಾವಣೆಯಿಂದ ಉತ್ತರ ಕನ್ನಡ ಜಿಲ್ಲೆಯ ರಾಜಕೀಯ ಚಿತ್ರಣವೇ ಬದಲಾಗಿದೆ. ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್, ಎರಡು ಕ್ಷೇತ್ರವನ್ನು ಬಿಜೆಪಿ ಗೆಲ್ಲುವ ಮೂಲಕ ಈ ಸಲ ಬಿಜೆಪಿ ತನ್ನ ಮೂರು ಸ್ಥಾನವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಹೆಚ್ಚುವರಿಯಾಗಿ ಮೂರು ಸ್ಥಾನ ತನ್ನಾಗಿಸಿಕೊಂಡಿದೆ.

ಶಿರಸಿಯಲ್ಲಿ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದಿದ್ದ ಸತತ ಆರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸೋಲುಂಡಿದ್ದಾರೆ. ಇದೇವೇಳೆ ಸತತ ಸೋಲು ಅನುಭವಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಗೆಲುವಿನ ನಗೆ ಬೀರಿದ್ದಾರೆ. ಕಾರವಾರದಲ್ಲಿ ಸತೀಶ್ ಸೈಲ್, ಭಟ್ಕಳದಲ್ಲಿ ಮಂಕಾಳು ವೈದ್ಯ, ಶಿರಸಿಯಲ್ಲಿ ಭೀಮಣ್ಣ ನಾಯ್ಕ, ಹಳಿಯಾಳದಲ್ಲಿ ಆರ್. ವಿ. ದೇಶಪಾಂಡೆ (ಕಾಂಗ್ರೆಸ್) ಹಾಗೂ ಕುಮಟಾದಲ್ಲಿ ದಿನಕರ ಶೆಟ್ಟಿ, ಯಲ್ಲಾಪುರದಲ್ಲಿ ಶಿವರಾಮ್ ಹೆಬ್ಬಾರ್ (ಬಿಜೆಪಿ) ಗೆಲುವು ಸಾಧಿಸಿದ್ದಾರೆ.

ವಿಧಾನಸಭಾ ಅಧ್ಯಕ್ಷರಾಗಿದ್ದ ಕಾಗೇರಿಯವರು ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಾರಿ 68175 ಮತಗಳನ್ನ ಪಡೆದಿದ್ದು, ಭೀಮಣ್ಣ ನಾಯ್ಕ (76887) ಮತಗಳನ್ನು ಪಡೆದು 8712 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಸತೀಶ ಸೈಲ್ಅವರು 76305 ಮತಗಳನ್ನು ಪಡೆದರೆ ಬಿಜೆಪಿಯ ರೂಪಾಲಿ ನಾಯ್ಕ ಅವರು 73890 ಮತಗಳನ್ನು ಪಡೆದು 2415 ಮತಗಳಿಂದ ಪರಾಭಗೊಂಡರು. ಜೆಡಿಎಸ್ ಅಭ್ಯರ್ಥಿ 2864 ಮತಗಳನ್ನು ಪಡೆದರು.

ಭಟ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ಅಭ್ಯರ್ಥಿ ಮಂಕಾಳ ವೈದ್ಯ ಅವರು ಬಿಜೆಪಿ ಶಾಸಕರಾಗಿದ್ದ ಸುನೀಲ ನಾಯ್ಕ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಂಕಾಳ ವೈದ್ಯ ಅವರು 99603 ಮತಗಳನ್ನು ಪಡೆದು 32657 ಮತಗಳಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಸುನೀಲ ನಾಯ್ಕ 66946 ಮತಗಳನ್ನು ಪಡೆದರು. ಕುಮಟಾ-ಹೊನ್ನಾವರ ಕ್ಷೇತ್ರದಲ್ಲಿ ಹಾವು-ಏಣಿ ಆಟದಲ್ಲಿ ಅಂತೂ ಇಂತೂ ಬಿಜೆಪಿಯ ದಿನಕರ ಶೆಟ್ಟಿ ಅವರು ಜೆಡಿಎಸ್ನ ಸೂರಜ ನಾಯ್ಕ ಸೋನಿ ವಿರುದ್ಧ ಪ್ರಯಾಸದ ಗೆಲುವು ಕಂಡಿದ್ದಾರೆ.

ಬಿಜೆಪಿಯ ದಿನಕ ಶೆಟ್ಟಿ 59966 ಮತಗಳನ್ನು ಪಡೆದು ಕೇವಲ 663 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಸೂರಜ ನಾಯ್ಕ ಸೋನಿ ಅವರು 59293 ಮತಗಳನ್ನು ಪಡೆದು ಸೋಲು ಅಭವಿಸಿದ್ದಾರೆ. ಕೊನೆಯ ಸುತ್ತಿನ ವರೆಗಗೂ ಮುನ್ನಡೆಯಲ್ಲಿದ್ದ ಸೋನಿ ಅವರು ಕೊನೆಯ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದರು. ಕಾಂಗ್ರೆಸ್ ಅಭ್ಯರ್ಥಿ ನಿವೇದಿತಾ ಆಳ್ವ ಅವರು 19272 ಮತಗಳನ್ನು ಪಡೆದು ನಿರಾಶಾದಾಯಕ ಪ್ರದರ್ಶನ ನೀಡಿದರು.

ಹಳಿಯಾಳ- ಜೊಯಿಡಾ- ದಾಂಡೇಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ವಿ.ದೇಶಪಾಂಡೆ 9ನೇ ಬಾರಿಗೆ ಗೆಲುವು ಸಾಧಿಸಿದ್ದಾರೆ. ಆದರೆ ಈ ಸಲ ಅವರು ಗೆಲುವು ಪ್ಯಾಸದ ಗೆಲುವು ಎಂದು ಹೇಳಬಹುದು. ಅನೇಕ ಸುತ್ತುಗಳಲ್ಲಿ ಹಿಂದುಳಿದಿದ್ದ ಅವರು ಹಾವು ಏಣಿಯಾಟದಲ್ಲಿ ಕೊನೆಯ ಕೆಲವು ಸುತ್ತುಗಳಲ್ಲಿ ಮುನ್ನಡೆ ಸಾಧಿಸಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 56912 ಮತಗಳನ್ನು ಪಡೆದು ದೇಶಪಾಂಡೆಯವರು 3584 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಿದ್ದ ಸುನೀಲ್ ಹೆಗಡೆ 53328 ಮತಗಳನ್ನ ಪಡೆದರು.

ದೇಶಪಾಂಡೆಯವರು ಕೇವಲ ಒಂದು ಸಲ ಮಾತ್ರ ಸೋಲು ಕಂಡಿದ್ದಾರೆ. ಅದು ಸಹ ಸುನಿಲ ಹೆಗಡೆ ಅವರ ವಿರುದ್ಧ ಸೋಲು ಕಂಡಿದ್ದರು. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವರಾಗಿದ್ದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ ಕಾಂಗ್ರೆಸ್ಅಭ್ಯರ್ಥಿ ವಿ. ಎಸ್. ಪಾಟೀಲ ವಿರುದ್ಧ 3759 ಮತಗಳಿಂದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ 73952 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ 70193 ಮತಗಳನ್ನು ಪಡೆದರು.

Ashika S

Recent Posts

ಕಾಪು ಪಿಲಿಕೋಲ ಸಂಪನ್ನ: ಓರ್ವನನ್ನು ಸ್ಪರ್ಶಿಸಿದ ಪಿಲಿ

ಇತಿಹಾಸ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ…

9 mins ago

ಬಿಜೆಪಿಯ ʼಮೊಟ್ಟೆʼ ವಿಡಿಯೋ ವಿರುದ್ಧ ಕಾಂಗ್ರೆಸ್‌ ಕಿಡಿ

ಚುನಾವಣೆ ಎಲ್ಲೆಡೆ ರಂಗೇರಿದೆ. ಒಂದೆಡೆ ನಾಯಕರ ವಾಗ್ದಾಳಿ ಇನ್ನೊಂದೆಡೆ ಪಕ್ಷಗಳ ನಡುವೆ ಬೇರೆ ಬೇರೆ ರೀತಿಯಲ್ಲಿ ವಾಗ್ಧಾಳಿ ನಡೆಯುತ್ತಲೇ ಇದೆ.…

11 mins ago

ಮೋದಿ ಪ್ರಧಾನಿಯಾದ ಮೇಲೆ ದೇಶ ಜಗತ್ತಿನ ಎದುರು ತಲೆ ಎತ್ತಿ ನಿಂತಿದೆ

ದಾವಣಗೆರೆಯಲ್ಲಿ ಬಿಜೆಪಿ  ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರ ರೋಡ್ ಶೋ ನಡೆಸಿದ ಮಾಜಿ ಸಚಿವ ಸಿ.ಟಿ ರವಿ, ಮೋದಿ ಪ್ರಧಾನಿಯಾದ…

20 mins ago

ಸಮಗಾರ ಸಮಾಜವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಸಮಾಜದ ಮುಖಂಡರ ಮನವಿ

೨೦೨೪ರ ಲೋಕಸಭಾ ಚುನಾವಣೆಯಲ್ಲಿ ಸಮಗಾರ ಸಮಾಜವು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ರಾಜು ಆಲಗೂರರವರಿಗೆ ಮತ ಚಲಾಯಿಸಬೇಕೆಂದು ಜಿಲ್ಲೆಯ ಸಮಗಾರ…

29 mins ago

ಇನ್ನು ಕೆಲವೇ ಕ್ಷಣದಲ್ಲಿ ಹೆಚ್‌ಡಿ ರೇವಣ್ಣ ಜಡ್ಜ್ ಮುಂದೆ ಹಾಜರು

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್. ಡಿ. ರೇವಣ್ಣ ಅವರನ್ನು ಕೆಲವೇ ಹೊತ್ತಿನಲ್ಲೇ…

33 mins ago

ಸೆನ್ಸಾರ್​ ಪ್ರಕ್ರಿಯೆ ಪೂರ್ಣಗೊಳಿಸಿದ ರಂಜನಿ ರಾಘವನ್ ಅಭಿನಯದ ‘ಸತ್ಯಂ’ ಸಿನೆಮಾ

ಕೆಲವೇ ತಿಂಗಳ ಹಿಂದೆ ‘ಸತ್ಯಂ’ ಸಿನಿಮಾ ಟೀಸರ್​ ಬಿಡುಗಡೆ ಆಗಿತ್ತು. ಟೀಸರ್​ ನೋಡಿದ ಎಲ್ಲರಿಗೂ ಕೌತುಕ ಮೂಡಿದೆ. ಈಗ ಈ…

43 mins ago