ಉತ್ತರಕನ್ನಡ

ಕಾರವಾರ: ಜಿಲ್ಲೆಯಲ್ಲಿ ಕೋವಿಡ್ ಸಮಸ್ಯೆ ಎದುರಿಸಲು ಆರೋಗ್ಯ ಇಲಾಖೆ ಸಜ್ಜು

ಕಾರವಾರ: ಕೊರೋನಾ ಕಾಟ ಎದುರಿಸಲು ಉತ್ತರಕನ್ನಡ ಜಿಲ್ಲೆ ಸನ್ನದ್ಧವಾಗಿದ್ದು, ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಪ್ರಾರಂಭಿಕ ಹಂತದಲ್ಲಿ 12 ಬೆಡ್‌ಗಳ ಪ್ರತ್ಯೇಕ ಕೊಠಡಿ ಸಿದ್ಧವಾಗಿದೆ. ಇದೀಗ ಮತ್ತೆ ಎಲ್ಲೆಡೆ ಕೋವಿಡ್ ಸದ್ದು ಶುರುವಾಗಿದ್ದು, ಸರ್ಕಾರ ಕೂಡ ಮಾರ್ಗಸೂಚಿ ಹೊರಡಿಸಿ ನಿಯಮ ಪಾಲನೆಗೆ ಸೂಚಿಸಿದೆ. ಅಲ್ಲದೇ ಜಿಲ್ಲಾಡಳಿತಗಳಿಗೂ ಕೋವಿಡ್ ಎದುರಿಸಲು ತಯಾರಿರುವಂತೆ ಸೂಚಿಸಿದ್ದು, ಈ ನಿಟ್ಟಿನಲ್ಲಿ ಕಾರವಾರದ ಜಿಲ್ಲಾ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಸಕಲ ವ್ಯವಸ್ಥೆಗಳನ್ನ ಮಾಡಿಕೊಳ್ಳಲಾಗಿದೆ.

ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಹೊಂದಿರುವ ಕೊಠಡಿಯನ್ನ ಆಸ್ಪತ್ರೆ ಆವರಣದಲ್ಲಿ ಸಿದ್ಧಪಡಿಸಲಾಗಿದ್ದು, ಜಿಲ್ಲಾಸ್ಪತ್ರೆಯ ಹಿಂಬದಿಯಿರುವ ಮೆಡಿಕಲ್ ಕಾಲೇಜಿನಲ್ಲೂ ಸೋಂಕಿತರಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. 450 ಬೆಡ್‌ಗಳ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ 300ಕ್ಕೂ ಮಿಕ್ಕಿ ಬೆಡ್‌ಗಳು ಕೊರೋನಾ ಚಿಕಿತ್ಸೆಗೆ ಸಿದ್ಧಪಡಿಸಲಾಗಿದೆ. ಮುಂದಿನ‌ ದಿನಗಳಲ್ಲಿ ಹೆಚ್ಚಿನ ಸೋಂಕಿತರು ಕಾಣಿಸಿಕೊಂಡಲ್ಲಿ ಮೆಡಿಕಲ್ ಕಾಲೇಜಿನ ಬೆಡ್‌ಗಳಿಗೆ ಕೊರೊನಾ ಸೋಂಕಿತರನ್ನ ಶಿಫ್ಟ್ ಮಾಡುವುದಾಗಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಶಿವಾನಂದ ಕುಡ್ತರಕರ್ ತಿಳಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸೇವೆಗೆ 329ಕ್ಕೂ ಅಧಿಕ ವೈದ್ಯ ಸಿಬ್ಬಂದಿ ಲಭ್ಯವಿದ್ದು, ಒಂದು ಬಾರಿಗೆ 100 ಐಸಿಯು ರೋಗಿಗಳಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜ್ವರದ ಲಕ್ಷಣಗಳಿರುವವರಿಗೆ ಕೊರೋನಾ‌ ಟೆಸ್ಟ್ ನಡೆಸಲಾಗುತ್ತಿದ್ದು, ದಿನವೊಂದಕ್ಕೆ ಪ್ರಸ್ತುತ 100 ಪರೀಕ್ಷೆ ನಡೆಸಲಾಗುತ್ತಿದ್ದರೂ ಕಳೆದ 15 ದಿನಗಳಲ್ಲಿ ಯಾವುದೇ ಪಾಸಿಟಿವ್ ಬಂದಿಲ್ಲ. ಸಾರಿ, ಐಎಲ್ಐ ಲಕ್ಷಣ ಇರುವವರಿಗೂ ಆರ್‌ಟಿಪಿಸಿಆರ್ ಟೆಸ್ಟ್ ಮಾಡಲಾಗುತ್ತಿದ್ದು, ಕೊರೊನಾ ಎದುರಿಸಲು ಆಸ್ಪತ್ರೆಯಲ್ಲಿ 150 ರೆಮ್‌ಡಿಸಿವಿಯರ್ ಔಷಧಿ, ಆಕ್ಸಿಜನ್ ಕಿಟ್‌ಗಳು ಹಾಗೂ ಇತರ ಔಷಧಿಗಳ ಸಂಗ್ರಹ ಮಾಡಿಡಲಾಗಿದೆ.

Gayathri SG

Recent Posts

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

18 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

43 mins ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

1 hour ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

3 hours ago