News Karnataka Kannada
Sunday, May 12 2024
ಉತ್ತರಕನ್ನಡ

ಕಾರವಾರ: ಉ.ಕ‌. ಜಿಲ್ಲೆಯಲ್ಲಿ ಭಾರೀ ‌ಮಳೆ ಹಿನ್ನೆಲೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

U.K. Holiday declared for schools, colleges in the district due to heavy rains
Photo Credit : By Author

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಕಳೆದ ಮೂರು ದಿನಗಳಿಂದ ಸುರುಯುತ್ತಿದ್ದು ಮಳೆಯ ಪ್ರಮಾಣ ಮಂಗಳವಾರ ಹೆಚ್ಚಾದ ಹಿನ್ನೆಲೆ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ
ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ, ಅಂಗನವಾಡಿಗಳಿಗೆ ರಜೆ ನೀಡಲಾಗಿದೆ‌.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶದಂತೆ ರಜೆ ಘೋಷಣೆ ಮಾಡಲಾಗಿದೆ. ಅದರಂತೆ ಜುಲೈ 7 ರ ವರೆಗೆ ಭಾರಿ ಮಳೆ ಇದ್ದು ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ಭರ್ಜರಿಯಾಗಿ ಸುರಿಯುತ್ತಿದ್ದು, ಹಲವೆಡೆ ಅವಾಂತರಗಳನ್ನ ಸೃಷ್ಟಿಸಿಯಾಗಿದೆ. ಗೋವಾ ರಾಜ್ಯದ ಗಡಿ ಭಾಗವಾದ ಜೊಯಿಡಾ ತಾಲೂಕಿನ ಅನಮೋಡ ಘಟ್ಟದ ಬಳಿ ಗುಡ್ಡ ಕುಸಿದು ಗೋವಾ- ಅನಮೋಡ ರಾಷ್ಟ್ರೀಯ ಹೆದ್ದಾರಿ ಸಂಚಾರ ಸದ್ಯ ಸ್ಥಗಿತಗೊಂಡಿದೆ. ಗೋವಾ ಗಡಿಯಲ್ಲಿ ಗುಡ್ಡ ಕುಸಿದ್ದಿದ್ದು, ಸದ್ಯ ಗುಡ್ಡ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಗುಡ್ಡ ಕುಸಿತದಿಂದಾಗಿ ರಸ್ತೆಯಲ್ಲಿ ದೊಡ್ಡ ದೊಡ್ಡ ಕಲ್ಲು, ಮಣ್ಣು ತುಂಬಿಕೊಂಡಿದ್ದು, ಜೆಸಿಬಿಗಳನ್ನು ಬಳಸಿ ತಡರವು ಮಾಡಲಾಗುತ್ತಿದೆ. ಇದರಿಂದಾಗಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಜು.7ರವರೆಗೂ ಭಾರೀ ಮಳೆ ಮುಂದುವರಿಯುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜು.8ರವರೆಗೆ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಭಾರೀ ಗಾಳಿ ಸಹಿತ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಿದೆ.

ಈ ಅವಧಿಯಲ್ಲಿ ಗಾಳಿಯು ಪ್ರತಿ ಗಂಟೆಗೆ 40- 50 ಕಿ.ಮೀ. ವೇಗದಲ್ಲಿ ಬೀಸಲಿದೆ ಎನ್ನಲಾಗಿದ್ದು, ಕಡಲತೀರ, ನದಿಪಾತ್ರದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಮುದ್ರ ಪ್ರಕ್ಷುಬ್ಧವಾಗಿರುವ ಹಿನ್ನೆಲೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು