News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಗರ್ಭಿಣಿಗೆ ಡಿಕ್ಕಿ ಹೊಡೆದ ರಿಕ್ಷಾ- ಮಹಿಳೆ ಸ್ಥಳದಲ್ಲೇ ಸಾವು

Woman killed on the spot after being hit by a rickshaw that hits pregnant woman
Photo Credit : By Author

ಕಾರವಾರ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿಯೊಬ್ಬರಿಗೆ ರಿಕ್ಷಾ ಬಡಿದ ಕಾರಣದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಅಂಕೋಲಾದ ಭಾವಿಕೇರಿಯಲ್ಲಿ ನಡೆದಿದೆ.

ಅಂಕೋಲಾದ ಶೋಭಾ ಗೋಪಾಲ ನಾಯಕ (28) ಮೃತ ಮಹಿಳೆಯಾಗಿದ್ದಾಳೆ. ಆಕೆ ಸುಮಾರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು. ಇವರು ತನ್ನ ಮನೆ ಮುಂದಿನ ಡಾಂಬರು ರಸ್ತೆ ಪಕ್ಕದ ಮಣ್ಣಿನ ರಸ್ತೆಯಲ್ಲಿ ನಡೆದಿಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ರಿಕ್ಷಾ ಚಾಲಕ ನಿಯಂತ್ರಣ ತಪ್ಪಿ ಮಹಿಳೆಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಗರ್ಭಿಣಿ ಮಹಿಳೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅಂಕೋಲಾದ ಲಕ್ಷೇಶ್ವರ – ಕುಂಬಾರಕೇರಿ ವ್ಯಾಪ್ತಿಯ ರಿಕ್ಷಾ ಚಾಲಕ ಎಂದು ತಿಳಿದು ಬಂದಿದೆ. ಸ್ಥಳದಿಂದ ರಿಕ್ಷಾ ಚಾಲಕ ಪರಾರಿಯಾಗಿದ್ದಾನೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು