News Karnataka Kannada
Thursday, May 02 2024
ಉತ್ತರಕನ್ನಡ

ಕಾರವಾರ: ಪಾಳಾ-ಸಣ್ಣಕತ್ರಿ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

Karwar: Work on construction of new Pala-Sannakatri road begins
Photo Credit : By Author

ಕಾರವಾರ: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಶನಿವಾರ ಮುಂಡಗೋಡ ತಾಲೂಕಿನ ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಪಾಳಾ – ಸಣ್ಣಕತ್ರಿ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.

ಜಿಲ್ಲೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಒತ್ತು ನೀಡಿದ್ದು ಮುಂದಿನ ದಿನದಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯರಾದ ಶಾಂತಾರಾಮ್ ಸಿದ್ದಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು ಹಾಗೂ ಸ್ಥಳೀಯ ಮುಖಂಡರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು