News Karnataka Kannada
Thursday, May 02 2024
ಉತ್ತರಕನ್ನಡ

ಕಾರವಾರ: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸಲು ಜಿಪಂ ಸಿಇಒ ಸೂಚನೆ

Zilla Panchayat CEO instructs to create awareness on voters' list revision through innovative programmes
Photo Credit : By Author

ಕಾರವಾರ: ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ಮಾಹಿತಿ ತಿದ್ದುಪಡಿ ಸಂಬಂದಿಸಿದಂತೆ ಚುನಾವಣಾ ಆಯೋಗವು ಪ್ರಮುಖವಾಗಿ ಮೂರು ಪ್ರಕಾರದ ನಮೂನೆಗಳನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯಾದ್ಯಂತ ಈ ನಮೂನೆ ಹಾಗೂ ಪತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿನೂತನ ಮಾದರಿಯಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಿ ಅರಿವು ಮೂಡಿಸಲು ಮುಂದಾಗಬೇಕು ಎಂದು ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಪ್ರಿಯಾಂಗಾ ಎಂ ಅವರು ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್‌ನ ಆವರಣದಲ್ಲಿರುವ ಕೇಸ್ವಾನ್ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮಗಳ ಆಯೋಜನೆ ಕುರಿತು ಸೋಮವಾರ ಜರುಗಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ವಿಶೇಷ ಚೇತನರು, ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರು, ಹಿರಿಯ ನಾಗರಿಕರು, ಬುಡಕಟ್ಟು ಜನಾಂಗದವರು ಸೇರಿದಂತೆ ವಿವಿಧ ವಿಶೇಷ ವರ್ಗದವರನ್ನು ಮತದಾರರ ಗುರುತಿನ ಪಟ್ಟಿಯಲ್ಲಿ ನೊಂದಾಯಿಸಲು ಅಧಿಕಾರಿಗಳು ಕ್ರಮವಹಿಸಬೇಕಿದೆ. ಜೊತೆಗೆ ಪ್ರಮುಖವಾಗಿ ಪ್ರಸ್ತುತ ಎಲ್ಲಾ ಚುನಾವಣಾ ಮತದಾರರ ಚೀಟಿಯ ನಂಬರ್‌ನ್ನು ಆಧಾರ್ ಸಂಖ್ಯೆಗೆ ಜೋಡಿಸು ಪ್ರಕ್ರಿಯೆಗೂ ಮುಂದಾಗಬೇಕು. ಈ ನಿಟ್ಟಿನಲ್ಲಿ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸ್ವೀಪ್ ಸಮಿತಿ ರಚಿಸಿಕೊಂಡು ಮತದಾರರ ಜಾಗೃತಿ ಕಾರ್ಯಕ್ರಮಗಳ ಆಯೋಜನೆಗೆ ನಿಗಾವಹಿಸಬೇಕು ಎಂದರು.

ಶಾಲಾ-ಕಾಲೇಜು ಹಂತದಲ್ಲಿ ಮತದಾರರ ನೋಂದಣಿ ಕುರಿತು ಅರಿವು ಮೂಡಿಸುವುದರ ಜೊತೆಗೆ 18 ವರ್ಷ ಮೇಲ್ಪಟ್ಟ ಎಲ್ಲರ ಹೆಸರನ್ನು ನೋಂದಣಿ ಮಾಡಿಸಿ ಈ ಮಾಹಿತಿಯನ್ನು ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ಗೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ವಿವಿಧ ಬಗೆಯ ಸ್ವಿಪ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅಲ್ಲದೇ ಜಿಲ್ಲೆಯಲ್ಲಿನ ಸ್ವ-ಸಹಾಯ ಸಂಘಗಳ ಮಹಿಳೆಯರ ನೋಂದಣಿ ಅಥವಾ ಹೆಸರು ತಿದ್ದುಪಡಿಯಾಗುವಂತವರ ಮಾಹಿತಿಯನ್ನು ಎನ್‌ಆರ್‌ಎಲ್‌ಎಂ ಸಿಬ್ಬಂದಿ ನೀಡಬೇಕು.‌ಪ್ರತಿ ಗ್ರಾಮ ಪಂಚಾಯತಿಯ ಕಸ ಸಂಗ್ರಹ ವಾಹನದಲ್ಲಿ ಮತದಾನ ನೋಂದಣಿ ಕುರಿತಾದ ಜಿಂಗಲ್ಸ್‌ಗಳ ಮೂಲಕ ಪ್ರಚಾರ ಮಾಡಬೇಕು.

ಜಿಲ್ಲೆಯಲ್ಲಿರುವ ಯುವಕ ಸಂಘಗಳಲ್ಲಿನ ಯುವಕರನ್ನು ಸೇರಿಸಿಕೊಂಡು ಮತದಾನ ನೊಂದಣಿ ಜೊತೆಗೆ ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲೆಯಲ್ಲಿ ನಡೆಯುವಂತಹ ಜನ ಸಂದಣಿಯ ಜಾತ್ರೆ, ವಾರದ ಸಂತೆ, ಬಸ್ ನಿಲ್ದಾಣ, ಸರಕಾರಿ ಕಚೇರಿಗಳು, ಶಾಲಾ-ಕಾಲೇಜು ಆವರಣದಲ್ಲಿ ಬ್ಯಾನರ್ ಮತ್ತು ಹೋಲ್ಡಿಂಗ್ಸ್ ಅಳವಡಿಸಬೇಕು.

ಜಿಲ್ಲೆಯಾದ್ಯಂತ ಮತದಾನ ಜಾಗೃತಿ ಹಾಗೂ ಮತದಾರರ ಗುರುತಿನ ಚೀಟಿ ತಿದ್ದುಪಡಿ, ಹೆಸರು ನೋಂದಣಿ ಬಗ್ಗೆ ವಿಶೇಷ ಶಿಬಿರಗಳನ್ನು ಆಯೋಜಿಸಬೇಕು. ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಸ್ವೀಪ್ ಕಾರ್ಯಕ್ರಮದಡಿ ಮತದಾನ ಜಾಗೃತಿ ಬಗ್ಗೆ ಹಮ್ಮಿಕೊಂಡ ವಿವಿಧ ಕಾರ್ಯಕ್ರಮಗಳ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಅರಿವು ಮೂಡಿಸಬೇಕು. ತಾಲೂಕಾ ನೋಡಲ್ ಅಧಿಕಾರಿಗಳಾದ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸ್ವೀಪ್ ಕಾರ್ಯಕ್ರಮದಡಿ ಜರುಗುವ ಜಾಗೃತಿ ಜಾಥಾ, ಶಿಬಿರ, ಸ್ಪರ್ಧಾ ಚಟುವಟಿಕೆಗಳ ಸಮಗ್ರ ವರದಿಯನ್ನು ಜಿಲ್ಲಾ ಪಂಚಾಯತ್‌ಗೆ ಸಲ್ಲಿಸಬೇಕು ಎಂದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯರು, ನರೇಗಾ ಐಇಸಿ ಸಂಯೋಜಕರು, ಸಿಬ್ಬಂದಿ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು