News Karnataka Kannada
Friday, May 10 2024
ಉತ್ತರಕನ್ನಡ

ಕುಂದಾಪುರ: ಮದರ್ ಥೆರೆಸಾ ಮೆಮೋರಿಯಲ್ ಶಾಲೆಯಲ್ಲಿ ಚರ್ಚೆಗೆ ಕಾರಣವಾದ ಸ್ವಾಗತ ನೃತ್ಯ

A welcome dance that sparked a debate at Mother Teresa Memorial School
Photo Credit : News Kannada

ಕುಂದಾಪುರ: ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟ ಆಯೋಜಿಸಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾಡಿದ ಸ್ವಾಗತ ನೃತ್ಯ ಚರ್ಚೆಗೆ ಕಾರಣವಾಯ್ತು.

ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಹಾಡುಗಳಿಗೆ ವಿದ್ಯಾರ್ಥಿನಿಯರಿಂದ ನೃತ್ಯ ನಡೆದಿದೆ. ಅಲ್ಲಾಹು ಅಕ್ಬರ್‌ಗೆ (ಆಜಾನ್) ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ಸ್ಥಳದಲ್ಲೇ ಆಕ್ಷೇಪ ವ್ಯಕ್ತವಾಯ್ತು. ವೇದಿಕೆಯಲ್ಲಿದ್ದ ಸ್ಥಳೀಯ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದ್ದೆ ಖಂಡನೆ ಮಾಡಿದರು.

ಸ್ಥಳೀಯ ಹಿಂದೂ ಪರ ಸಂಘಟನೆಗಳ ಖಂಡಿಸಿದ್ದು, ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದರು. ಕ್ಷಮೆ ಯಾಚಿಸದಿದ್ದರೆ ಪ್ರತಿಭಟಿಸುವ ಎಚ್ಚರಿಕೆ ನೀಡಿದರು. ಕೆಲಕಾಲ ಚರ್ಚೆ ನಡೆದು, ಶಾಲಾ ಆಡಳಿತ ಮಂಡಳಿ ವಿಷಾದ ವ್ಯಕ್ತಪಡಿಸಿದೆ.

ಸ್ವಾಗತ ನೃತ್ಯದಲ್ಲಿ 30 ಸೆಕೆಂಡ್ ಆಜಾನ್‌ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದರು, ಆಮೇಲೆ ಕ್ರೈಸ್ತ ಧರ್ಮದ ಬೈಬಲ್‌ ಮತ್ತು ಶ್ಲೋಕಕ್ಕೆ ಹೆಜ್ಜೆ ಹಾಕಿದ್ದರು. ಹಿಂದೂ ಧಾರ್ಮಿಕ ಪದ್ಯಕ್ಕೂ ವಿದ್ಯಾರ್ಥಿಗಳು ಕುಣಿದಿದ್ದರು. ಆಜಾನ್ ಹೆಜ್ಜೆ ಹಾಕಿದ್ದರು. ಯಾರದ್ದೂ ಭಾವನೆಯನ್ನು ಘಾಸಿಗೊಳಿಸಲಾಗಿದೆ ಉದ್ದೇಶ ನಮ್ಮದಾಗಿರಲಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸುತ್ತೇವೆ ಎಂದು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ವಿಷಾದ ವ್ಯಕ್ತಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು