News Karnataka Kannada
Monday, April 29 2024
ಉತ್ತರಕನ್ನಡ

ಕುಂದಾಪುರ: ಊರಿನ ಸಾಧಕರನ್ನು ಗುರುತಿಸಿ ಗೌರವಿಸುವುದು ಗ್ರಾಮಕ್ಕೆ ನೀಡಿದ ಗೌರವ -ಬಸವರಾಜ ಹೊರಟ್ಟಿ

Recognizing and honouring the achievers of the village is an honour to the village: Basavaraj Horatti
Photo Credit : News Kannada

ಕುಂದಾಪುರ: 25 ವರ್ಷಗಳಿಂದ ಗ್ರಾಮದ ಅಭಿವೃದ್ಧಿಗೆ ಹಾಗೂ ಸಮಾಜಕ್ಕೆ ಸೇವೆ ನೀಡುತ್ತಿರುವ ಮಿತ್ರಸಂಗಮದ ಕಾರ್ಯ ಶ್ಲಾಘನೀಯವಾದದ್ದು ಊರಿನಲ್ಲಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಪ್ರವೃತ್ತಿ ಗ್ರಾಮಕ್ಕೆ ನೀಡಿದ ದೊಡ್ಡ ಗೌರವವಾಗಿದೆ ಎಂದು ಕನಾ೯ಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಬೀಜಾಡಿ-ಗೋಪಾಡಿ ಮಿತ್ರಸಂಗಮದ ರಜತಮಹೋತ್ಸವ ಸಮಾರಂಭದ ರಜತಪಥ ನೆರಳು ಬೆಳಿಕಿನ ಸಹಯಾನದ 2ನೇ ದಿನದ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ, ವಿದ್ಯಾಥಿ೯ಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು.

ಕೋಟ ಶ್ರೀ ಅಮೃತೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ ಸಿ ಕುಂದರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಕೆದೂರು ಪ್ರಗತಿಪರ ಕೃಷಿಕ ರಾಮಕೃಷ್ಣ ಬಾಯಿರಿ ವಿಕಲಚೇತನರಿಗೆ ಗಾಲಿಕುಚಿ೯ ವಿತರಿಸಿದರು.

ಭರಮಸಾಗರ ಡಿವಿಎಸ್ ವಿದ್ಯಾಸಂಸ್ಥೆ ಅಧ್ಯಕ್ಷ ಪ್ರದೀಪ್ ಡಿ.ವಿ.ಎಸ್, ಹೊಟೇಲ್ ಉದ್ಯಮಿ ಕೆ.ಎಚ್.ಮಂಜುನಾಥ್ ದೇವಾಡಿಗ,ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ನಾಗರಾಜ್,ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಕೆ.ಅನಂತಪದ್ಮನಾಭ ಐತಾಳ,ಮಿತ್ರಸಂಗಮದ ಕಾರ್ಯದಶಿ೯ ರಾಜೇಶ್ ಆಚಾರ್ ಬೀಜಾಡಿ, ರಜತಮಹೋತ್ಸವ ಸಮಿತಿಯ ಕಾಯಾ೯ಧ್ಯಕ್ಷ ಶಂಕರನಾರಾಯಣ ಬಾಯಿರಿ, ಅಧ್ಯಕ್ಷ ದೀಪಾನಂದ ಉಪಾಧ್ಯಾಯ, ಪ್ರಧಾನ ಕಾರ್ಯದಶಿ೯ ಚಂದ್ರ ಬಿ.ಎನ್ ಮತ್ತಿತರರು ಉಪಸ್ಥಿತರಿದ್ದರು.

ಗಾಯಕ ಮಾಧವ ಬೀಜಾಡಿ ಪ್ರಾಥಿ೯ಸಿದರು.ಮಿತ್ರಸಂಗಮದ ಗೌರವಾಧ್ಯಕ್ಷ ವಾದಿರಾಜ್ ಹೆಬ್ಬಾರ್ ಸ್ವಾಗತಿಸಿದರು. ಅಧ್ಯಕ್ಷ ಚಂದ್ರಶೇಖರ ಬೀಜಾಡಿ ಪ್ರಾಸ್ತಾವಿಕ ಮಾತನಾಡಿದರು. ಪತ್ರಕರ್ತ ಕೆ.ಸಿ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ರಜತಮಹೋತ್ಸವ ಸಮಿತಿ ಉಪಾಧ್ಯಕ್ಷ ಅನೂಪ್ ಕುಮಾರ್ ಬಿ.ಆರ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು