ಕಾರವಾರ: ನಕಲಿ ಆಧಾರ್ ಹಾಗೂ ಪಾನ್ ಕಾರ್ಡ್ ತಯಾರಿಸುತ್ತಿದ್ದ ವ್ಯಕ್ತಿ ಬಂಧನ

ಕಾರವಾರ: ನಕಲಿ ಆಧಾರ್ ಹಾಗೂ ಪಾನ್ ಕಾರ್ಡ್ ತಯಾರಿಸುತ್ತಿದ್ದ ವ್ಯಕ್ತಿಯನ್ನು ಕುಮಟಾ ಠಾಣೆ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ದಿಲೀಪ ಬಿ. ಆರ್. ರಾಜೆಗೌಡ ಬಂಧಿತ ಆರೋಪಿ. ಕುಮಟಾ ತಾಲೂಕಿನ ಹೆಗಡೆ ನಿವಾಸಿ ಸುಬ್ರಾಯ ಕಡೆಕೋಡಿ ಅವರ ಮೃತ ಪುತ್ರ ಶಮಂತ ಕಡೆಕೋಡಿ ಅವರ ಹೆಸರಿನ ಆಧಾರ ಕಾರ್ಡ್ ದಾಖಲೆಗಳನ್ನು ತಿದ್ದಿ, ದುರ್ಬಳಕೆ ಮಾಡಿರುವ ಬಗ್ಗೆ ಸುಬ್ರಾಯ ಕಡೆಕೋಡಿ ಅವರು ಕುಮಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ಹಾಗೂ ಪಿಎಸ್ಐ ನವೀನ ನಾಯ್ಕ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ದಿಲೀಪ, ಮೃತರ ಹೆಸರಿನ ಆಧಾರ ಕಾರ್ಡ್ ಮತ್ತು ಪಾನ್ ಕಾರ್ಡ್ಗಳನ್ನು ತನ್ನದೇ ಸಾಫ್ಟ್ ವೇರ್ ಬಳಸಿ ನಕಲಿಸುತ್ತಿದ್ದ. ಅದನ್ನು ಬಳಸಿ ಗೋವಾದಲ್ಲಿ ಐ ಫೋನ್ ಖರೀದಿಸಿ ಮೋಸ ಮಾಡಿದಲ್ಲದೇ ಇದೇ ಕೃತ್ಯ ರಾಜ್ಯದ ವಿವಿಧೆಡೆ ಮಾತ್ರವಲ್ಲದೇ ಸಿಐಡಿಯಲ್ಲೂ ಪ್ರಕರಣ ದಾಖಲಾಗಿದೆ.

Gayathri SG

Recent Posts

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

3 mins ago

ಬೆಂಗಳೂರಿನಲ್ಲಿ ಭಾರಿ ಮಳೆ; ಆರ್​ಸಿಬಿ- ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2024ರ 62 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಇಂದು ಸಂಜೆ…

18 mins ago

ದೇಶದ ಸಂಪೂರ್ಣ ಸಂಪತ್ತನ್ನು ಶ್ರೀಮಂತರಿಗೆ ಕೊಟ್ಟಿದ್ದಾರೆ ಮೋದಿ: ಪ್ರಿಯಾಂಕಾ ವಾಗ್ದಾಳಿ

ಇಲ್ಲಿನ ಕಾಂಗ್ರೆಸ್​ ಲೋಕಸಭಾ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿರುವ 'ಕೈ' ನಾಯಕ ರಾಹುಲ್ ಗಾಂಧಿ ಪರ ಪ್ರಚಾರ ಮಾಡಲು ಆಗಮಿಸಿದ ಅವರ…

43 mins ago

ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಹಲ್ಲುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯವಾಗಿದೆ.  ಗುಟ್ಕಾ, ಎಲೆಅಡಿಕೆ, ತಂಬಾಕು ಅಗೆಯುವುದರಿಂದ, ಬೀಡಿ, ಸಿಗರೇಟ್ ಸೇದುವುದರಿಂದ ಹಲ್ಲುಗಳು ನೈಜ ಹೊಳಪು…

58 mins ago

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ ವ್ಯಕ್ತಿ ಸಾವು

ವಿಶ್ವದಲ್ಲೇ ಮೊದಲ ಬಾರಿಗೆ ಹಂದಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದ 62 ವರ್ಷದ ರಿಚರ್ಡ್​ ಸ್ಲಾಯ್​​ಮನ್ ನಿಧನರಾಗಿದ್ದಾರೆ. ಕಳೆದ ಮಾರ್ಚ್​​ನಲ್ಲಿ ಅವರು…

1 hour ago

ಎಸ್‌ಐಟಿಯವರು ಅಪರಾಧಿಗಳನ್ನ ಬಂಧಿಸುತ್ತಿಲ್ಲ: ಬಸವರಾಜ ಬೊಮ್ಮಾಯಿ

ಪ್ರಜ್ವಲ್ ಪ್ರಕರಣದ ತನಿಖೆ ನಡೆಯುತ್ತಿರುವ ರೀತಿ ಸರಿ ಇಲ್ಲ. ಎಸ್‌ಐಟಿಯ ತನಿಖೆಯ ದಿಕ್ಕು ತಪ್ಪುತ್ತಿದೆ. ಅಪರಾಧಿಗಳನ್ನ ಎಸ್‌ಐಟಿಯವರು ಬಂಧಿಸುತ್ತಿಲ್ಲ. ಎಂದು…

2 hours ago