ಉತ್ತರ ಕನ್ನಡ: ಪರೇಶ್ ಮೇಸ್ತಾ ಪ್ರಕರಣ, ಸಿಬಿಐ ವರದಿಯನ್ನು ಮರುಪರಿಶೀಲನೆ ಮಾಡಲಾಗುವುದು

ಉತ್ತರ ಕನ್ನಡ : ಹಿಂದೂ ಯುವಕ ಪರೇಶ್ ಮೇಸ್ತಾ ಕುರಿತ ಸಿಬಿಐ ಮುಕ್ತಾಯ ವರದಿಯನ್ನು ಮರುತನಿಖೆಗಾಗಿ ಪರಿಶೀಲಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

‘ಪರೇಶ್ ಮೇಸ್ತಾ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಬಿ-ರಿಪೋರ್ಟ್ ಸಲ್ಲಿಸಿದೆ. ಆದಾಗ್ಯೂ, ಮೇಸ್ತಾ ಅವರ ತಂದೆ ಪ್ರಕರಣವನ್ನು ಮರು ತನಿಖೆ ಮಾಡಲು ಕೇಳಿದ್ದಾರೆ. ಮರು ತನಿಖೆಗೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ಪರಿಶೀಲನೆ ನಡೆಸುತ್ತಿದೆ” ಎಂದು ಸಚಿವ ಜ್ಞಾನೇಂದ್ರ ಹೇಳಿದರು.

ಪರೇಶ್ ಮೇಸ್ತಾ ಅವರ ಅನುಮಾನಾಸ್ಪದ ಸಾವನ್ನು ಪರಿಶೀಲಿಸುವುದು ಮತ್ತು ನಿಖರವಾದ ಕಾರಣವನ್ನು ಕಂಡುಹಿಡಿಯುವುದು ಅಗತ್ಯವಾಗಿದೆ . ಇದು ಕೊಲೆ ಪ್ರಕರಣ ಎಂದು ಮೇಸ್ತಾ ಅವರ ತಂದೆ ಮತ್ತು ಸ್ಥಳೀಯರು ಹೇಳುತ್ತಾರೆ ಎಂದು ಅವರು ಹೇಳಿದರು.

2017 ರಲ್ಲಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ಕೋಮು ಘರ್ಷಣೆಗಳು ನಡೆಯುತ್ತಿದ್ದಾಗ ಹಿಂದೂ ಯುವಕ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ತಿಳಿಸಲಾಗಿದೆ.

ಸ್ನೇಹಿತರೊಂದಿಗೆ ಸುಮಾರು ೨೫ ಕಿಲೋಮೀಟರ್ ಪ್ರಯಾಣಿಸಿದ ನಂತರ ಕುಮಟಾ ನಗರದಲ್ಲಿ ಆಗಿನ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಮೇಸ್ತಾ ಭಾಗವಹಿಸಿದ್ದರು ಎಂದು ಚಾರ್ಜ್ ಶೀಟ್ ನಲ್ಲಿ  ಉಲ್ಲೇಖಿಸುತ್ತದೆ.

2017ರ ಡಿ.6ರಂದು ಹೊನ್ನಾವರ ಪಟ್ಟಣದಲ್ಲಿ ನಡೆದ ಕೋಮುಗಲಭೆಯಲ್ಲಿ ನಾಪತ್ತೆಯಾಗಿದ್ದ ಪರೇಶ್ ಮೇಸ್ತ ಎರಡು ದಿನಗಳ ಬಳಿಕ ಶೆಟ್ಟಿಕೆರೆ ಕೆರೆ ಬಳಿ ಶವವಾಗಿ ಪತ್ತೆಯಾಗಿದ್ದ.

ಆಡಳಿತಾರೂಢ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಗುಂಪು ಹಿಂಸಾಚಾರದಲ್ಲಿ ಪರೇಶ್ ಅವರನ್ನು ಕೊಲ್ಲಲಾಗಿದೆ ಮತ್ತು ಕೊಲೆಗಾರರು ನಂತರ ಶವವನ್ನು ಕೆರೆ ಬಳಿ ಎಸೆದಿದ್ದಾರೆ ಎಂದು ಆರೋಪಿಸಿದ್ದರು.

Ashika S

Recent Posts

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ : ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು - ಅಳಿಕೆ ಬಂಟ್ವಾಳ…

6 mins ago

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

9 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

15 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

21 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

34 mins ago

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ : ಆನ್‌ಲೈನ್‌ನಲ್ಲಿ ಹೀಗೆ ನೋಡಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ ಪ್ರಮಾಣ…

43 mins ago