News Karnataka Kannada
Thursday, May 09 2024
ಉತ್ತರಕನ್ನಡ

ಉತ್ತರಕನ್ನಡ: ಭಾರೀ ಮಳೆಗೆ ಮನೆ ಗೋಡೆ ಕುಸಿದು ತಾಯಿ-ಮಗಳು ಸಾವು

mother-daughter-duo-killed-as-wall-of-their-house-collapses-due-to-heavy-rains
Photo Credit : By Author

ಉತ್ತರಕನ್ನಡ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಮನೆ ಗೋಡೆ ಕುಸಿದು ಮಲಗಿದ್ದಲ್ಲೇ ತಾಯಿ-ಮಗಳು ಮೃತಪಟ್ಟ ಘಟನೆ ಹಳಿಯಾಳ ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ಮಂಗಳವಾರ ಬೆಳಗಿನಜಾವ ಸಂಭವಿಸಿದೆ.

ಮೃತ ದುರ್ದೈವಿಗಳು ರುಕ್ಮಿಣಿ ವಿಠ್ಠಲ್ ಮಾಚಕ(37) ಮತ್ತು ಇವರ ಪುತ್ರಿ ಶ್ರೀದೇವಿ ವಿಠ್ಠಲ್ ಮಾಚಕ(13) ಎಂದು ತಿಳಿದು ಬಂದಿದೆ. ನಿರಂತರ ಮಳೆಗೆ ಇವರು ವಾಸವಿದ್ದ ಮಣ್ಣಿನ ಮನೆಯ ಗೋಡೆ ಕುಸಿದಿದೆ. ಪರಿಣಾಮ ಮಲಗಿದ್ದಲ್ಲೇ ಅಮ್ಮ-ಮಗಳು ಶವವಾಗಿದ್ದಾರೆ.

ಸ್ಥಳಕ್ಕೆ ತಹಸೀಲ್ದಾರ್​ ಪ್ರಕಾಶ ಗಾಯಕವಾಡ, ತಾಪಂ ಇಒ ಪರಶುರಾಮ್ ಗಸ್ತಿ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು