ಕಾರವಾರ: ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಹಾಗೂ ಸಚಿವರಾದ ಶಿವರಾಮ ಹೆಬ್ಬಾರ್ ಅವರ ಬಡವರ, ರೈತರ ಹಾಗೂ ಕಾರ್ಮಿಕ ಪರವಾದ ಯೋಜನೆಗಳನ್ನು ಕ್ಷೇತ್ರದ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ಇಂದೂರ ಗ್ರಾಮ ಪಂಚಾಯತ್ ವ್ಯಾಪ್ತಿಯ 200 ಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ಕಾಂಗ್ರೆಸ್ ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡ ಕಾರ್ಯಕರ್ತರುಗಳಿಗೆ ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಕ್ಷದ ಶಾಲು ಹಾಕಿ ಅತ್ಯಂತ ಆತ್ಮೀಯತೆಯಿಂದ ಭಾರತೀಯ ಜನತಾ ಪಕ್ಷಕ್ಕೆ ಬರಮಾಡಿಕೊಂಡು ಮುಂದಿನ ದಿನಗಳಲ್ಲಿ ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕೆ.ಸಿ.ಗಲಭಿ ಹಾಗೂ ಸ್ಥಳೀಯ ಮುಖಂಡರಾದ ಗುಡ್ಡಪ್ಪ ಕಾತೂರ, ಸಿದ್ದು ಹಡಪದ, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.