News Karnataka Kannada
Saturday, May 04 2024
ಉತ್ತರಕನ್ನಡ

ಮತದಾನ ಜಾಗೃತಿಗಾಗಿ ಬೈಕ್ ಜಾಥಾಕ್ಕೆ ಜಿಲ್ಲಾಧಿಕಾರಿ ಚಾಲನೆ

Poll awareness bike jatha flagged off by deputy commissioner and ZP CEO
Photo Credit : News Kannada

ಕಾರವಾರ: ಸಾರ್ವತ್ರಿಕ ಚುನಾವಣೆಯು ಸುಗಮವಾಗಿ ನಡೆಸಲು ಹಾಗೂ ಜನರಲ್ಲಿ ಮತದಾನದ ಅರಿವು ಮೂಡಿಸಲು ಜಿಲ್ಲಾಡಳಿತವು ಪೂರ್ವ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಜಿಲ್ಲಾ ಸ್ವೀಪ್ ಸಮಿತಿ, ಕಾರವಾರ ತಾಲೂಕು ಪಂಚಾಯತ್‌‌ ರವರಿಂದ ಕಡ್ಡಾಯ ಹಾಗೂ ನಿಷ್ಪಕ್ಷಪಾತ ಮತದಾನ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಕೇಂದ್ರ ಚುನಾವಣಾ ಆಯೋಗದಿಂದ ಒದಗಿಸಲಾದ ಅಂಚೆ ಮತದಾನ ಅವಕಾಶದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ ಮತದಾನ ಜಾಗೃತಿ ಬೈಕ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಾಧ್ಯಂತ ಈಗಾಗಲೇ ಕಳೆದ ಎರಡು-ಮೂರು ತಿಂಗಳಿಂದ ಗ್ರಾಮ ಪಂಚಾಯಿತಿ ಹಂತದಿಂದ ಜಿಲ್ಲಾ ಮಟ್ಟದವರೆಗೆ ಸ್ವೀಫ್ ಚಟುವಟಿಕೆಗಳ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಮತದಾನದ ಬಗ್ಗೆ ಜಾಗೃತಿಯನ್ನು ಮೂಡಿಸಲಾಗಿದೆ. ಹಾಗೆಯೇ ಈ ಚುನಾವಣೆಯಲ್ಲಿ 80 ವರ್ಷ ಪೂರೈಸಿದ ಹಿರಿಯ ನಾಗರಿಕರಿಗೆ ಅಂಚೆ ಮತದಾನ ಹಮ್ಮಿಕೊಂಡಿದ್ದು, ಅಂಚೆ ಮತದಾನದ ಮಹತ್ವವನ್ನು ಜನರಿಗೆ ಅರಿವು ಮೂಡಿಸಲು ಈಗಾಗಲೇ ಎಲ್ಲ ಕ್ರಮ ವಹಿಸಲಾಗಿದೆ ಎಂದರು.

ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಮಾತನಾಡಿ, ಜನರಲ್ಲಿ ಮತದಾನದ ಅರಿವು ಮೂಡಿಸಲು ಈಗಾಗಲೇ ಗ್ರಾಮೀಣ ಪ್ರದೇಶದ ಸಾರ್ವಜನಿಕ ಸ್ಥಳಗಳಲ್ಲಿ ಜರುಗುವ ಸಂತೆಗಳು, ಯಕ್ಷಗಾನ ಸಮ್ಮೇಳನಗಳು, ಜಾತ್ರೆಗಳಲ್ಲಿ ಸ್ವೀಪ್ ಚಟುವಟಿಕೆಗಳಡಿ ವಿಭಿನ್ನವಾಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಆದಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಾತದಾನದ ಅರಿವು ಮೂಡಿಸಲು ಕ್ರಮ ವಹಿಸಿದೆ ಎಂದರು. ಬಳಿಕ ಬೈಕ್ ಜಾಥಾವು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಈಶ್ವರ್ ಕುಮಾರ ಕಾಂದೂ ರವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಿಂದ ಹೊರಟು ಸುಭಾಷ್ ಚಂದ್ರ ಬೋಸ್ ಸರ್ಕಲ್‌, ಸವಿತಾ ಹೋಟೆಲ್ ಸರ್ಕಲ್, ಕಾಜುಬಾಗ್ ರೋಡ್ ಮುಖಾಂತರ ಕಾಳಿ ನದಿ ಗಾರ್ಡನ್ ಮೂಲಕ ಹಾಯ್ದು ಖಾಪ್ರಿ ದೇವಸ್ಥಾನ ಮೂಲಕ ಭದ್ರಾ ಹೋಟೇಲ್ ಎದುರುಗಡೆಯ ಸರ್ವಿಸ್ ರಸ್ತೆಯಿಂದ ಎಸ್‌ಪಿ ಕಚೇರಿ ಮಾರ್ಗವಾಗಿ ಜಿಲ್ಲಾ ಪಂಚಾಯಿತಿ ಕಾರ್ಯಾಲಯ ತಲುಪಿ ಮುಕ್ತಾಯಗೊಂಡಿತು.

ಕಾರ್ಯಕ್ರಮದಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ, ಅಪಾರ ಜಿಲ್ಲಾಧಿಕಾರಿ ರಾಜು ಮೊಗವೀರ, ಕಾರವಾರ ಉಪವಿಭಾಗದ ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ್, ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ(ಆಡಳಿತ) ಜಯಲಕ್ಷಮ್ಮ, ಉಪ ಕಾರ್ಯದರ್ಶಿ(ಅಭಿವೃದ್ಧಿ) ಡಿ.ಎಂ. ಜಕ್ಕಪ್ಪಗೋಳ್, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ, ಮುಖ್ಯ ಲೆಕ್ಕಾಧಿಕಾರಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು