ಪ್ರಾಥಮಿಕ ಶಾಲಾ ಕ್ರೀಡಾಕೂಟ: ಸಾರ್ವಭೌಮ ಗುರುಕುಲ ಸಮಗ್ರ ವೀರಾಗ್ರಣಿ

ಗೋಕರ್ಣ: ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದ ವಿದ್ಯಾರ್ಥಿಗಳು ಗುರುವಾರ ಇಲ್ಲಿನ ಭದ್ರಕಾಳಿ ಹೈಸ್ಕೂಲ್ ಮೈದಾನದಲ್ಲಿ ನಡೆದ ಪ್ರಾಥಮಿಕ ಇಲಾಖಾ ಶಾಲಾ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ.

“ಗುರುಕುಲದ ಮಕ್ಕಳ ಸಾಧನೆ ಹೆಮ್ಮೆಪಡುವಂಥದ್ದು. ಮುಂದಿನ ಹಂತದಲ್ಲಿ ವಿದ್ಯಾರ್ಥಿಗಳು ಮತ್ತಷ್ಟು ಸಾಧನೆ ಮಾಡಲು ಇದು ಪ್ರೇರಣೆ. ಸಾಂಪ್ರದಾಯಿಕ ಹಾಗೂ ನವಯುಗ ಹೀಗೆ ಸಮಗ್ರ ಶಿಕ್ಷಣ ಪಡೆಯುತ್ತಿರುವ ನಮ್ಮ ವಿದ್ಯಾರ್ಥಿಗಳು ಆಟೋಟದಲ್ಲೂ ಕಡಿಮೆ ಇಲ್ಲ ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಸಂತಸ ವ್ಯಕ್ತಪಡಿಸಿದ್ದಾರೆ.

ವಿಶ್ವಾಸ ಹೆಬ್ಬಾರ (100 ಮೀ. ಓಟ ಪ್ರಥಮ ಮತ್ತು 200 ಮೀ. ಓಟ ದ್ವಿತೀಯ), ರಘುವರ್ಧನ್ (600 ಮೀ. ಓಟ  ದ್ವಿತೀಯ), ತಿರುನಾರಾಯಣ (100 ಮೀ. ಓಟ ತೃತೀಯ) ಬಹುಮಾನ ಪಡೆದಿದ್ದಾರೆ. ರೀಲೆ ಓಟದಲ್ಲಿ ವಿಶ್ವಾಸ್ ಸಂಗಡಿಗರು ಪ್ರಥಮ ಸ್ಥಾನ ಗಳಿಸಿದ್ದು, ಗುಂಡು ಎಸೆತದಲ್ಲಿ ತಿರುನಾರಾಯಣ(ದ್ವಿತೀಯ),  ಚದುರಂಗದಲ್ಲಿ ವಿಶ್ವಾಸ ಹೆಬ್ಬಾರ, ತೇಜಸ್ವಿ ಹೆಗಡೆ ಮತ್ತು ಭುವನೇಶ ಆಚಾರಿ (ಪ್ರಥಮ) ಬಹುಮಾನ ಪಡೆದರು. ವಾಲಿಬಾಲ್‍ನಲ್ಲಿ ಗುರುಕುಲ ತಂಡ ಪ್ರಥಮ ಸ್ಥಾನ ಪಡೆದಿದ್ದು, ಶಾಲೆಯ ಖೋ ಖೋ ತಂಡ ಕೂಡಾ ಪ್ರಥಮ ಬಹುಮಾನ ಗೆದ್ದಿದೆ. ಯೋಗದಲ್ಲಿ ಸಮ್ಯಕ್ ಭಟ್ಟ, ಧನುಷ್ ಗಾಂವ್ಕರ್, ಜೀವನ ಟಿ. ಮತ್ತು ಆಯುಷ್ ಬಹುಮಾನ ನಡೆದಿದ್ದಾರೆ ಎಂದು ಮುಖ್ಯ ಶಿಕ್ಷಕಿ ಸೌಭಾಗ್ಯ ಭಟ್ಟ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಬಾಲಕಿಯ ವಿಭಾಗದ 600 ಮೀಟರ್ ಓಟದಲ್ಲಿ ಡಾರ್ನೀಶ  ಹೆಚ್ ತೃತೀಯ, ಚದುರಂಗದಲ್ಲಿ ಶ್ರೇಯಾ ಸಾಲೆ ಮತ್ತು ಶರ್ವಾಣಿ ಎಮ್.ಆರ್ ಬಹುಮಾನ ಪಡೆದಿದ್ದಾರೆ. ಥ್ರೋಬಾಲ್‍ನಲ್ಲಿ ಶಾಲಾತಂಡ ಪ್ರಥಮ ಹಾಗೂ ಖೋ ಖೋದಲ್ಲಿ ದ್ವಿತೀಯ ಸ್ಥಾನ ಗೆದ್ದಿದೆ.

ಈ ಎಲ್ಲ ವಿಜೇತ ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಪರಂಪರಾ ವಿಭಾಗದ ವರಿಷ್ಠಾಚಾರ್ಯ ಸತ್ಯನಾರಾಯಣ ಶರ್ಮ, ಶಿಕ್ಷಣ ಸಂಯೋಜಕಿ ಅಶ್ವಿನಿ ಉಡುಚೆ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಮುಖ್ಯಶಿಕ್ಷಕಿ ಸೌಭಾಗ್ಯ ಭಟ್ಟ ಮತ್ತಿತರರು ಶ್ಲಾಘಿಸಿದ್ದಾರೆ.

Sneha Gowda

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

30 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

57 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago