ಬಿಜೆಪಿ ಆಡಳಿತದಲ್ಲಿ ಮಂಜೂರಾದ ಕಾಮಗಾರಿಗಳ ಮುಂದುವರಿಕೆಗೆ ರೂಪಾಲಿ ಆಗ್ರಹ

ಕಾರವಾರ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರು ಮಾಡಿದ ಹಾಗೂ ಆರಂಭವಾದ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿರುವುದು ಜನವಿರೋಧಿ ನೀತಿಯಾಗಿದೆ. ಕೂಡಲೇ ಆ ಕಾಮಗಾರಿಗಳನ್ನು ಮುಂದುವರಿಸಬೇಕು ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕಾಮಗಾರಿಗಳಿಗೆಲ್ಲ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮಂಜೂರು ಮಾಡಿದ ಕಾಮಗಾರಿಗಳಾಗಿವೆ. ಇದಲ್ಲದೆ, ಎಲ್ಲ ಯೋಜನೆ, ಕಾಮಗಾರಿಗಳಿಗೆ ಕಾನೂನುಬದ್ಧವಾಗಿ ಅನುಮೋದನೆ ಪಡೆದೆ ಕಾಮಗಾರಿಗಳನ್ನು ಆರಂಭಿಸಲಾಗಿದೆ.

ಆದರೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಏಕಾಏಕಿ ಎಲ್ಲ ಕಾಮಗಾರಿಗಳಿಗೆ ತಡೆ ನೀಡಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸಿದಂತಾಗಿದೆ. ಈಗಾಗಲೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾಮಗಾರಿಗೆ ಹಿನ್ನಡೆಯಾಗಿದೆ. ಸದ್ಯದಲ್ಲೇ ಮಳೆಗಾಲ ಆರಂಭವಾಗಿ ಕಾಮಗಾರಿಗಳನ್ನು ನಡೆಸಲು ಕಷ್ಟಕರವಾಗಲಿದೆ. ಅದರಲ್ಲೂ ಕಾರವಾರ ಅಂಕೋಲಾ ಕ್ಷೇತ್ರದಲ್ಲಿ ವ್ಯಾಪಕ ಮಳೆಯಾಗುವುದರಿಂದ ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಪೂರೈಸಬೇಕಾಗಿದೆ.

ಸಾರ್ವಜನಿಕ ಹಿತಾಸಕ್ತಿಯ ಕಾಮಗಾರಿಗಳನ್ನು ತಡೆಹಿಡಿದಿರುವುದು ಜನವಿರೋಧಿ ನೀತಿಯಾಗಿರುವುದಷ್ಟೇ ಅಲ್ಲ, ಇದೊಂದು ಸೇಡಿನಕ್ರಮವಾಗಿದೆ ಎಂದೂ ಅಭಿಪ್ರಾಯಪಟ್ಟಿರುವ ರೂಪಾಲಿ ಎಸ್.ನಾಯ್ಕ, ಜನಹಿತದ ದೃಷ್ಟಿಯಿಂದ ಮಂಜೂರಾದ ಹಾಗೂ ಆರಂಭವಾಗಿರುವ ಎಲ್ಲ ಕಾಮಗಾರಿಗಳನ್ನು ಮುಂದುವರಿಸಲು ಆದೇಶ ನೀಡುವಂತೆಯೂ ಮನವಿ ಮಾಡಿದ್ದಾರೆ.

Sneha Gowda

Recent Posts

ರಾಮೇಶ್ವರಂ ಕೆಫೆ ಸ್ಫೋಟ ​​: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ನಗರದ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ಗೆ 14…

14 mins ago

ʻಮಹಾನಟಿ’ ತಂಡದ ವಿರುದ್ಧ ದೂರು ದಾಖಲು..!

ಕಿರುತೆರೆಯ ಖ್ಯಾತ ನಿರೂಪಕಿ,ತುಳುನಾಡ ಕುವರಿ ಅನುಶ್ರೀ, ರಮೇಶ್​ ಅರವಿಂದ್, ಪ್ರೇಮಾ ಅವರುಗಳ ವಿರುದ್ದ ಪ್ರಕರಣ ದಾಖಲಾಗಿದೆ.

51 mins ago

ಪ್ರಜ್ವಲ್‌ ಪ್ರಕರಣಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವರ್ಗಕ್ಕೆ ಅವಮಾನ ಮಾಡಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ…

1 hour ago

ಫಾದರ್‌ ಮುಲ್ಲರ್‌ ವೈದ್ಯಕೀಯ ಕಾಲೇಜಿನಲ್ಲಿ ಮೂಳೆ ಚಿಕಿತ್ಸೆಯಲ್ಲಿನ ಆಧುನಿಕ ತಂತ್ರಜ್ಞಾನ ಪ್ರದರ್ಶನ

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮೂಳೆ ಚಿಕಿತ್ಸಾ ವಿಭಾಗವು ಒಂದು ದಿನದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಿ ಆರ್ತ್ರೋಸ್ಕೊಪಿ ಬಗೆಗಿನ…

1 hour ago

ಪ್ರಗತಿ ಮೈದಾನದ ಸುರಂಗದಲ್ಲಿ ಅಪಘಾತ : ದೆಹಲಿ ಪೊಲೀಸ್ ಸಿಬ್ಬಂದಿ ಸಾವು

ನಗರದ ಪ್ರಗತಿ ಮೈದಾನದ ಸುಂರಗ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು ದೆಹಲಿ ಪೊಲೀಸ್ ಸಿಬ್ಬಂದಿ ಸಾವನಪ್ಪಿದ್ದಾರೆ. ಅಪಘಾತದ ದೃಶ್ಯ ಕ್ಯಾಮೆರದಲ್ಲಿ ಸೆರೆಯಾಗಿದೆ.…

1 hour ago

ಬೈಂದೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ನೇಮಕ

ಕರ್ನಾಟಕದಲ್ಲಿ ೨ನೇ ಹಂತದ ಚುನಾವಣಾ ಪ್ರಚಾರಕ್ಕೆ ಉಸ್ತುವಾರಿಗಳ ನೇಮಕವನ್ನು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮಾಡಿದ್ದಾರೆ. ಅದರಂತೆ ಚುನಾವಣೆಗೆ ಉಸ್ತುವಾರಿಗಳ…

2 hours ago