ವಿದ್ಯುತ್ ಬಿಲ್ ದರ ಏರಿಕೆ: ಕಾರವಾರದ ಅಂಗಡಿ ಮಳಿಗೆ ಬಂದ್, ಪ್ರತಿಭಟನೆ

ಕಾರವಾರ: ವಿದ್ಯುತ್ ಬಿಲ್ ಏರಿಕೆಯಾಗಿದ್ದರಿಂದ ರಾಜ್ಯ ಸರಕಾರದ ವಿರುದ್ಧ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ವತಿಯಿಂದ ನೀಡಲಾಗಿದ್ದ ಬಂದ್ ಕರೆಗೆ ಕಾರವಾರ ನಗರದಲ್ಲಿ ಎಲ್ಲ ಅಂಗಡಿ ಮಳಿಗೆ ಬಂದ್ ಮಾಡಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದಲ್ಲಿ ಬೆಳಗ್ಗೆಯಿಂದಲೇ ಬಂದ್ ಆಗಿದ್ದರಿಂದ ಜನರು ತೊಂದರೆ ಅನುಭವಿಸುವಂತಾಗಿತು. ರಿಕ್ಷಾ ಚಾಲಕರ ಸಂಘಟನೆಯಿಂದ ಬಂದ್ ಗೆ ಬೆಂಬಲ ನೀಡಿದ್ದವು. ಶಾಲೆ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದವು. ಬಸ್ ವ್ಯವಸ್ಥೆ ಸಹಜವಾಗಿದ್ದವು. ಆದರೆ ಜನಜಂಗುಳಿಯಿಂದ ತುಂಬಿರುತ್ತಿದ್ದ ನಗರದ ವಿವಿಧ ರಸ್ತೆಗಳು ಭಾಗಶಃ ಖಾಲಿಯಾಗಿದ್ದವು. ನಗರದ ಸವಿತಾ ವೃತ್ತದಲ್ಲಿ ಜಮಾಯಿಸಿದ ಸಂಘದ ಸದಸ್ಯರು ಮತ್ತು ಅಂಗಡಿಗಾರರು ಹಾಗೂ ಆಟೋ, ಚಾಲಕರ ಮಾಲಕರು, ಸಣ್ಣ ವ್ಯಾಪಾರಿಗಳು ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆಯ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿದರು.

ವಿದ್ಯುತ್ ದರ ಏರಿಕೆಯನ್ನು ಖಂಡಿಸಿ ದಾರಿಯುದ್ದಕ್ಕೂ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರನ್ನು ಉದ್ದೇಶಿಸಿ ಕಾರವಾರ ಚೆಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಜಿತೇಂದ್ರ ತನ್ನಾ ಮಾತನಾಡಿ, ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಏರಿಕೆ ಮಾಡಿರುವುದರಿಂದ ದೊಡ್ಡ ಸೇರಿದಂತೆ ಸಣ್ಣ ಉದ್ದಿಮೆಗಳು ತೊಂದರೆಗೆ ಸಿಲುಕಿವೆ. ದುಪ್ಪಟ್ಟು ಬಿಲ್ ಬಂದಿದ್ದರಿಂದ ಉದ್ದಿಮೆಗಳನ್ನು ನಡೆಸಬೇಕೋ, ಬೇಡವೋ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕೇವಲ ಉದ್ದಿಮೆಗಳಿಗಷ್ಟೇ ಅಲ್ಲ 50ರಿಂದ 100 ಯುನಿಟ್ ಬಳಸಲು ಮನೆಗಳಿಗೂ ದುಪ್ಪಟ್ಟು ಬಿಲ್ ಬಂದಿದೆ. ವಿದ್ಯುತ್ ಬಿಲ್ ಏರಿಕೆಯ ಬಗ್ಗೆ ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರೆ ಅವರು ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Ashika S

Recent Posts

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

25 seconds ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

30 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

47 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

1 hour ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago