ಶಿರಸಿ: ಶಾಸಕ ಸ್ಥಾನಕ್ಕೆ ಹೊಸದುರ್ಗ ಕ್ಷೇತ್ರದ ಗೂಳಿಹಟ್ಟಿ ಶೇಖರ್ ಗುರುವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಪಕ್ಷ ನನಗೆ ಅವಕಾಶ ನೀಡಿದೆ. ಪಕ್ಷ ಅಥವಾ ನಾಯಕರ ಮೇಲೆ ಬೇಸರವಿಲ್ಲ. ನಾಳೆ ಇನ್ನೊಂದು ಸುತ್ತಿನ ಮಾತುಕತೆ ನಡೆಸಿ ಸ್ಪರ್ಧೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.