ವಿದ್ಯಾರ್ಥಿಗಳಿಂದ ಸಾವಿರಾರು ರೂ. ವಸೂಲಿ ಮಾಡಿದ ಉಪನ್ಯಾಸಕ: ಗ್ರಾಮಸ್ಥರಿಂದ ದೂರು

ಕಾರವಾರ: ಮುಂಡಗೋಡ ತಾಲೂಕಿನ ನ್ಯಾಸರ್ಗಿ ಐಟಿಐ ಕಾಲೇಜಿನ ಉಪನ್ಯಾಸಕರೋರ್ವರು ವಿದ್ಯಾರ್ಥಿಗಳಿಂದ ವಿವಿಧ ಕಾರಣಕ್ಕಾಗಿ ಹಣ ವಸೂಲಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಉಪನ್ಯಾಸಕ ರವಿ ಭಜಂತ್ರಿ ಎನ್ನುವವರು ವಿದ್ಯಾರ್ಥಿಗಳಿಂದ ಸಮವಸ್ತ್ರ ಹಾಗೂ ಪುಸ್ತಕಗಳನ್ನು ನೀಡುವುದಾಗಿ 3000ರೂ. ಹಣ ವಸೂಲಿ ಮಾಡಿದ್ದಾರೆ. ಶಿರಸಿಗೆ ಪರೀಕ್ಷೆ ಬರೆಯಲು ಹೋದ ವಿದ್ಯಾಥಿಗಳಿಂದ 500ರೂ. ಹಣ ಹಾಗೂ ವಿದ್ಯಾರ್ಥಿಗಳು ಗೈರಾಗಿದ್ದರೆ ಅಂಥಹ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಈ ಆಯುಕ್ತರಿಗೆ ದೂರು ಸಲ್ಲಿಸಿದ್ದರು.

ಆಯುಕ್ತರ ಸೂಚನೆ ಮೇರೆಗೆ ಬೆಳಗಾವಿ ಜಂಟಿ ನಿರ್ದೇಶಕರು ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಹಾಗೂ ಅಲ್ಲಿನ ಪ್ರಾಂಶುಪಾಲರಿಂದ ಮಾಹಿತಿ ಪಡೆದುಕೊಂಡು ಆಯುಕ್ತರಿಗೆ ವರದಿ ಮಾಡಿದ್ದಾರೆ.

ಈ ಬಗ್ಗೆ ತಕ್ಷಣ ಗ್ರಾಮಸ್ಥರು ಐಟಿಐ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಪ್ರಾಂಶುಪಾಲ ರವಿ ಕಮಡೊಳ್ಳಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ನಂತರ ಆಪಾದನೆಗೊಳಗಾದ ಉಪನ್ಯಾಸಕ ರವಿ ಭಜಂತ್ರಿ ಅವರನ್ನು ಕರಿಸಿ ವಿಚಾರಿಸಲಾಯಿತು. ಆ ವೇಳೆ ಉಪನ್ಯಾಸಕ ತನ್ನ ತಪ್ಪನ್ನು ಒಪ್ಪಿಕೊಂಡು ಮುಂದೆ ಈ ರೀತಿ ಮಾಡುವುದಿಲ್ಲ ಎಂದು ಹೇಳಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Sneha Gowda

Recent Posts

ಪ್ರಜ್ವಲ್ ವಿರುದ್ಧ ನಾವು ಕೊಟ್ಟ ಮೊದಲ ದೂರು ದಾಖಲಾಗಿಲ್ಲ: ವಕೀಲ ಆಕ್ರೋಶ

ಹಾಸನ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ…

15 mins ago

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ : ಶೋಭಾ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವೆ ಕುಮಾರಿ…

30 mins ago

ಕೋವಿಶೀಲ್ಡ್ ಲಸಿಕೆಯ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ: ದಿನೇಶ್ ಗುಂಡೂರಾವ್

ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮಗಳು ಉಂಟಾಗುತ್ತಿದೆ ಎಂಬ ಕುರಿತು ಜನರು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

34 mins ago

ಪ್ರಜ್ವಲ್ ರೇವಣ್ಣ ಅಂತಹ ಸ್ವಭಾವದ ಹುಡುಗ ಅಲ್ಲ ಎಂದ ಸಂಸದ ಜಿ.ಎಸ್ ಬಸವರಾಜ್

ಪ್ರಜ್ವಲ್ ರೇವಣ್ಣ ನನ್ನ ಆತ್ಮೀಯ ಸ್ನೇಹಿತ. ಅಂತಹ ಸ್ವಭಾವದ ಹುಡುಗ ಅಲ್ಲ. ಪ್ರಜ್ವಲ್ ಅವರ ಮೇಲಿನ ಪ್ರಕರಣ ಸತ್ಯನೋ ಸುಳ್ಳೋ…

52 mins ago

ಕಾಂಗ್ರೆಸ್ ಕೊಲೆಗಡಕರನ್ನು ಬಂಧನ ಮಾಡಬೇಕಾದ್ರೆ ನೂರು ಬಾರಿ ಯೋಚಿಸುತ್ತದೆ: ವಿಜಯೇಂದ್ರ

ಕಾಂಗ್ರೆಸ್ ಸರ್ಕಾರ ಕೊಲೆಗಡಕರನ್ನು ಬಂಧನ ಮಾಡಬೇಕು ಅಂದ್ರೆ ನೂರು ಬಾರಿ ಯೋಚನೆ ಮಾಡುತ್ತಾರೆ. ಲವ್ ಜಿಹಾದ್ ನಲ್ಲಿ ತಪಿತಸ್ಥರನ್ನು ಒಳಗೆ…

53 mins ago

ಬಿಜೆಪಿ ಸೋಲಿಸಿ ಕಾಂಗ್ರೆಸ್ ಗೆಲ್ಲಿಸಿ : ಧನರಾಜ ತಾಳಂಪಲ್ಲಿ

'ಸಂವಿಧಾನ ಬದಲಿಸಲು ನಿರ್ಧರಿಸಿದ ಬಿಜೆಪಿಯನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ, ಜನಪರವಾಗಿ ಕೆಲಸ ಮಾಡುವ ಇಚ್ಛೆ ಹೊಂದಿರುವ ಕಾಂಗ್ರೆಸ್‌…

1 hour ago