ಉತ್ತರಕನ್ನಡ

ಸೂಕ್ತ ಚಿಕಿತ್ಸೆ ಲಭಿಸದೆ ಮೂರು ತಿಂಗಳ ಮಗು ಸಾವು: ಆಸ್ಪತ್ರೆಯ ಮುಂದೆ ಶವ ಇಟ್ಟು ಪ್ರತಿಭಟನೆ

ಕಾರವಾರ: ನಗರದ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕ್ರಿಮ್ಸ್)ಯಲ್ಲಿ ಸೂಕ್ತ ಚಿಕಿತ್ಸೆ ಲಭಿಸದೆ ಮೂರು ತಿಂಗಳ ಮಗು ಮೃತಪಟ್ಟ ಘಟನೆ ನಡೆಸಿದ್ದು ಆಕ್ರೋಶಗೊಂಡ ಪಾಲಕರು, ಕುಟುಂಬದವರು ಮಗುವಿನ ಮೃತದೇಹವನ್ನು ಆಸ್ಪತ್ರೆಯ ಮುಂದಿಟ್ಟು ಪ್ರತಿಭಟನೆಯನ್ನು ಗುರುವಾರ ನಡೆಸಿದ್ದಾರೆ.

ಕಿನ್ನರ ಮೂಲದ ರಾಜೇಶ ನಾಗೇಕರ್ ಅವರ ಮೂರು ತಿಂಗಳ ಗಂಡು ಮಗು ರಾಜನ್ ನಾಗೇಕರ್ ಗೆ ಕಫ ತುಂಬಿಕೊಂಡಿತ್ತು. ಮಕ್ಕಳ ವೆಂಟಿಲೇಟರ್ ಆಂಬುಲೆನ್ಸ್ ಇಲ್ಲದಿರುವುದೇ ಮಗುವಿನ ಸಾವಿಗೆ ಕಾರಣ ಎಂದು ಮಗುವಿನ ತಂದೆ ರಾಜೇಶ ನಾಗೇಕರ ಆರೋಪಿಸಿದ್ದಾರೆ.

ಮೂರು ದಿನಗಳಿಂದ ಇಲ್ಲಿನ ಮೆಡಿಕಲ್ ಕಾಲೇಜ್ ನ ಮಕ್ಕಳ ವಿಶೇಷ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಒಳಪಡಿಸಲಾಗಿತ್ತು. ಕಳೆದ ಬುಧವಾರ ಮಗುವಿನ ಆರೋಗ್ಯ ಹದಗೆಟ್ಟ ಕಾರಣದಿಂದ ಉಡುಪಿಯ ಆಸ್ಪತ್ರೆಗೆ ಕೊಂಡೊಯ್ಯಲು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಶಿಫಾರಸು ಮಾಡಿದ್ದರು. ಆದರೆ, ಸರ್ಕಾರಿ ಮೆಡಿಕಲ್ ಕಾಲೇಜ್ ನಲ್ಲಿ ಮಕ್ಕಳ ವಿಶೇಷ ಆಂಬುಲೆನ್ಸ್ ಸೌಕರ್ಯ ಇಲ್ಲದ ಕಾರಣ ಉಡುಪಿಯಿಂದ ಆಂಬುಲೆನ್ಸ್ ತರಿಸಲಾಯಿತು. ಅಷ್ಟರಲ್ಲಿ ಮಗು ಮೃತಪಟ್ಟಿದೆ.

ಆಸ್ಪತ್ರೆಯಲ್ಲಿ ಮಕ್ಕಳಆಂಬುಲೆನ್ಸ್ ಸೌಲಭ್ಯ ಇಲ್ಲದಿರುವುದೇ ಮಗುವಿನ ಸಾವಿಗೆ ಕಾರಣ ಎಂದು ಪಾಲಕರು ಆಕ್ಷೇಪಿಸಿದರು. ಜಿಲ್ಲಾವಿದ್ಯಾರ್ಥಿ ಒಕ್ಕೂಟದ ರಾಘು ನಾಯ್ಕ, ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು. ಮದುವೆಯಾದ ಐದು ವರ್ಷದ ನಂತರ ಮಗು ರಾಜೇಶ ಜನಿಸಿದ್ದ. ದೇವರಿಗೆ ಹರಕೆ ಹೊತ್ತ ನಂತರ ಮಗು ಹುಟ್ಟಿತ್ತು. ಈಗ ಅದೂ ಮೃತಪಟ್ಟಿರುವುದು ದಂಪತಿಗಳ ತೀವ್ರ ದುಖಕ್ಕೆ ಕಾರಣವಾಗಿದೆ. ಮಗುವಿಗೆ ತೀವೃ ಅನಾರೋಗ್ಯ ಸ್ಥಿತಿಯಲ್ಲಿ ಹೆಚ್ಚಿನ ಉತ್ತಮ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಸಾಗಿಸಲು ವೆಂಟಿಲೇಟರ್ ವ್ಯವಸ್ಥೆ ಇರುವ ಆಂಬುಲೆನ್ಸ್ ವ್ಯವಸ್ಥೆ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಮಗು ಮೃತಪಟ್ಟಿದೆ.

ಆರು ತಿಂಗಳ ಹಿಂದೆ ಕ್ರಿಮ್ಸ್ ನಲ್ಲಿ ಮಕ್ಕಳವಿಶೇಷ ತುರ್ತು ನಿಗಾ ಘಟಕ ಪ್ರಾರಂಭಿಸಲಾಗಿದೆ. ಇದರಿಂದ ಇಲ್ಲಿಯವರೆಗೆ ಸಾಕಷ್ಟು ಮಕ್ಕಳ ಜೀವ ಉಳಿಸಲಾಗಿದೆ. ಈ ಮಗುವಿಗೂ ಚಿಕಿತ್ಸೆ ನೀಡಿದರೂ ನಮ್ಮ ಕೈ ಮೀರಿತು. ನಮ್ಮಲ್ಲಿ ಮಕ್ಕಳ ವೆಂಟಿಲೇಟರ್ ಇರುವ ಆಂಬುಲೆನ್ಸ್ ಇಲ್ಲ. ಅದಕ್ಕೆ ಪ್ರಸ್ತಾವನೆ ಕಳಿಸಲಾಗಿದೆ ಎಂದು ಕ್ರಿಮ್ಸ್ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ರಾಜಕುಮಾರ ಮರೋಳ ಪ್ರತಿಕ್ರಿಯಿಸಿದ್ದಾರೆ.

Gayathri SG

Recent Posts

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

3 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

18 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

40 mins ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

42 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

59 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

1 hour ago