News Karnataka Kannada
Wednesday, April 24 2024
Cricket
ಉತ್ತರಕನ್ನಡ

ಗೌರಿ ಏಕಾಂಗಿಯಾಗಿ ತೆಗೆದ ಬಾವಿಯಲ್ಲಿ ಹರಿದ ಜೀವಗಂಗೆ

Dig
Photo Credit : News Kannada

ಶಿರಸಿ: ಕಳೆದ 36 ದಿನಗಳಿಂದ ಅಂಗನವಾಡಿ ಆವರಣದಲ್ಲಿ ಏಕಾಂಗಿಯಾಗಿ ಬಾವಿ ತೋಡುತ್ತಿದ್ದ ಇಲ್ಲಿನ ಗಣೇಶ ನಗರದ ಮಹಿಳೆ ಗೌರಿ ನಾಯ್ಕ ನೀರು ತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 50 ಅಡಿ ಬಾವಿ ತೋಡಿ, ಗಂಗೆಯನ್ನು ಹೊರತರುವಲ್ಲಿ ಸಫಲರಾಗಿದ್ದಾರೆ.

ಗೌರಿಯ ಈ ಸಾಧನೆಗೆ ಸ್ಥಳೀಯ ಸಾರ್ವಜನಿಕರು ತೀವ್ರ ಸಂತೋಷ ವ್ಯಕ್ತಪಡಿಸಿ, ಗ್ರಾಮದ ಸುತ್ತಲೂ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಜ. 30ರಂದು ಶಿರಸಿ ಗಣೇಶ ನಗರದ ಅಂಗನವಾಡಿ ನಂಬರ್‌ 6ರಲ್ಲಿ ಮಕ್ಕಳಿಗೆ ಕುಡಿಯುವ ನೀರಿನ ಕೊರತೆ ಕಂಡು ಶಾಶ್ವತ ಪರಿಹಾರ ಕಲ್ಪಿಸಲು ಗೌರಿ ನಾಯ್ಕ (58) ಬಾವಿ ತೋಡಲು ಶ್ರೀಕಾರ ಹಾಕಿದ್ದರು.

30 ಅಡಿ ಆಳ ಬಾವಿ ತೆಗೆದ ಗೌರಿಯ ಸಾಹಸವನ್ನು ಮಾಧ್ಯಮಗಳು ಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡ್ಡಗಾಲು ಹಾಕಿ, ಬಾವಿ ಮುಚ್ಚಿಸಲಾಗಿತ್ತು. ಅದನ್ನು ಖಂಡಿಸಿ ಸ್ಥಳೀಯರು ಪ್ರತಿಭಟಿಸಿ, ಸಹಾಯಕ ಆಯುಕ್ತರ ಕಚೇರಿಗೆ ಹಾಗೂ ತಹಸೀಲ್ದಾ‌ರ್ ಕಚೇರಿಗೆ ಮನವಿ ಸಲ್ಲಿಸಿದ್ದರು. ಬಳಿಕ ಅನುಮತಿ ಸಿಕ್ಕಿತ್ತು. ಇದೀಗ ತೆಗೆದ ಬಾವಿಯಲ್ಲಿ ನೀರು ಸಿಕ್ಕಿರುವುದು ಸಂತಸ ತಂದಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು