Categories: ಕರಾವಳಿ

ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ನಿಂದ ಯುರೋಪ್‌ನಲ್ಲಿ ಯಕ್ಷಪ್ರದರ್ಶನ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಯುರೋಪ್‌ನ ವಿವಿಧ ಕಡೆಗಳಲ್ಲಿ ಯಕ್ಷಗಾನ ಪ್ರದರ್ಶಿಸಲಿದ್ದು ಗುರುವಾರ ಪ್ರಯಾಣ ಬೆಳೆಸಲಿದೆ ಎಂದು ಫೌಂಡೇಷನ್‌ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.
ಜೂನ್ ತಿಂಗಳಲ್ಲಿ ಲಂಡನ್‌, ಮಿಡ್‌ಲ್ಯಾಂಡ್‌, ಡುರ್ಹಾಮ್‌, ಲೀಡ್ಸ್‌, ಎಡಿನ್‌ ಬರ್ಗ್‌, ಸ್ಕಾಟ್ಲೆಂಡ್ ಮುಂತಾದ ಕಡೆಗಳಲ್ಲಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.

ಆಗಸ್ಟ್‌ನಲ್ಲೂ ಪ್ರದರ್ಶನ ನಡೆಯಲಿದ್ದು ಫ್ರಾನ್ಸ್, ಪ್ಯಾರಿಸ್‌, ಫ್ರಾಂಕ್‌ಫರ್ಟ್‌, ಮ್ಯೂನಿಕ್‌, ಜರ್ಮನಿ, ಬಿಲ್ಲಿಂಗಾಮ್‌, ಡುರ್ಹಾಮ್‌ನಲ್ಲಿ ಅಭಿಯಾನ ನಡೆಯಲಿದ್ದು ಪ್ರವಾಸದ ಉದ್ದಕ್ಕೂ ರಾಜ ವೇಷ, ಬಣ್ಣದ ವೇಷ, ಪಗಡಿ ವೇಷ, ಸ್ತ್ರೀ ವೇಷ ಮತ್ತು ಹಾಸ್ಯ ಪ್ರಧಾನ ಪಾತ್ರದ ವೇಷಗಳು ಮುದ ನೀಡಲಿವೆ ಎಂದು ಅವರು ತಿಳಿಸಿದರು.

ಅಮೆರಿಕದಲ್ಲಿರುವ ಪಣಂಬೂರು ವಾಸು ಐತಾಳ್ ಅವರ ನೇತೃತ್ವದಲ್ಲಿ ಅಭಿಯಾನ ಸಾಗಲಿದ್ದು ವಿಶ್ವ ವಿದ್ಯಾಲಯಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗಾಗಿ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ವೃತ್ತಿ ಕಲಾವಿದರು ಮಾತ್ರ ತೆರಳಲಿದ್ದು ಕೆಲವು ಪಾತ್ರಗಳಿಗೆ ಅಲ್ಲಿನ ಕನ್ನಡಿಗರಿಗೆ ಬಣ್ಣ ಹಚ್ಚಲಾಗುವುದು’ ಎಂದು ಅವರು ವಿವರಿಸಿದರು
ಪಣಂಬೂರು ವಾಸು ಐತಾಳ್‌, ಪ್ರೊ.ಎಂ.ಎಲ್‌.ಸಾಮಗ, ಪುರುಷೋತ್ತಮ ಭಂಡಾರಿ ಮತ್ತು ಸುದೇಶ್ ಕುಮಾರ್ ಇದ್ದರು.

Umesha HS

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

29 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

31 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

55 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago