News Karnataka Kannada
Wednesday, April 24 2024
Cricket
ಕರ್ನಾಟಕ

ಸೂಚನಾ ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸುವ ಮಸೂದೆ ಮಂಡನೆ

Sccc
Photo Credit : News Kannada

ಬೆಂಗಳೂರು:  ವ್ಯಾಪಾರ, ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸುವ ಮಸೂದೆ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಮಸೂದೆ, 2024 ಅನ್ನು ಇಂದು ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಲಾಯಿತು.

ನಾಮಫಲಕದ ಮೇಲಿನ ಅರ್ಧ ಭಾಗದಲ್ಲಿ ಕನ್ನಡವನ್ನು ಪ್ರದರ್ಶಿಸಬೇಕು. ವಾಣಿಜ್ಯ, ಕೈಗಾರಿಕಾ ಮತ್ತು ವ್ಯಾಪಾರ ಸಂಸ್ಥೆಗಳು, ಟ್ರಸ್ಟ್‌ಗಳು, ಸಲಹಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು, ಇತರವುಗಳ ಹೆಸರಿನ ಫಲಕಗಳು ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳ ಅನುಮೋದನೆಯೊಂದಿಗೆ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ತಿದ್ದುಪಡಿಯನ್ನು ಮಾಡಲಾಗುತ್ತದೆ.

ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದ ನಿರ್ದೇಶಕರನ್ನು ಸದಸ್ಯರನ್ನಾಗಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನು ರಾಜ್ಯ ಮಟ್ಟದ ಸಮಿತಿಯ ಸಂಚಾಲಕರನ್ನಾಗಿ ನೇಮಿಸಲಾಗುತ್ತದೆ. ಜನವರಿ 5 ರಂದು ಕರ್ನಾಟಕ ಸಚಿವ ಸಂಪುಟವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ತನ್ನ ಅನುಮೋದನೆಯನ್ನು ನೀಡಿತ್ತು.

ಕನ್ನಡ ಬೋರ್ಡ್​​ಗಳನ್ನು ಪ್ರದರ್ಶಿಸಲು ಕಾನೂನಿನ ಅಗತ್ಯವಿದೆ ಎಂದು ಕನ್ನಡ ಪರ ಸಂಘಟನೆಗಳು ಆಗ್ರಹಿಸಿದ್ದವು. ಇತ್ತೀಚೆಗೆ, ಕನ್ನಡಕ್ಕೆ ಪ್ರಾಧಾನ್ಯತೆ ನೀಡುತ್ತಿಲ್ಲ ಎಂದು ಬೆಂಗಳೂರಿನ ಕೆಲವು ಕಂಪನಿ ಮತ್ತು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಕನ್ನಡ ಪರ ಸಂಘಟನೆಗಳು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆಗೆ ತಿದ್ದುಪಡಿ ಮಾಡುವ ಸುಗ್ರೀವಾಜ್ಞೆಗೆ ಸಂಪುಟ ಅನುಮೋದನೆ ನೀಡಿತ್ತು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು