News Karnataka Kannada
Sunday, May 12 2024
ಕರ್ನಾಟಕ

ಕರ್ನಾಟಕ ಬಜೆಟ್: ರಾಜ್ಯದ ಮಹಿಳೆಯರಿಗೆ ಬಂಪರ್‌ ಉಡುಗೊರೆ

grilahakshmi-scheme
Photo Credit : Twitter

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮಹಿಳೆಯರಿಗೆ ಬಂಪರ್‌ ಉಡುಗೊರೆ ನೀಡಿದ್ದಾರೆ.

ತಮ್ಮ ಬಜೆಟ್‌ ಭಾಷಣದಲ್ಲಿ ರಾಜ್ಯದಲ್ಲಿನ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಅವರಿಗೆ ಸ್ವಯಂ ಉದ್ಯೋಗಕ್ಕಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಒದಗಿಸಲು 2 ಕೋಟಿ ರೂ. ಅನುದಾನ ಮತ್ತು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಒಟ್ಟಾರೆ ಪ್ರಸಕ್ತ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 70,427 ಕೋಟಿ ರೂ., ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2023-24 ನೇ ಸಾಲಿನಲ್ಲಿ 51,229 ಕೋಟಿ ರೂ. ಅನುದಾನ ಒದಗಿಸಿದ್ದಾರೆ.

ಈ ಯೋಜನೆಗಾಗಿ ನೋಂದಣಿ ಪ್ರಕ್ರಿಯೆ ಶೀಘ್ರವೇ ಪ್ರಾರಂಭವಾಗಲಿದ್ದು, ಮಹಿಳೆಯರ ಖಾತೆಗೆ ನೇರವಾಗಿ ಮಾಸಿಕ 2,000 ರೂ.ಗಳನ್ನು ವರ್ಗಾಯಿಸಲಾಗುವುದು. ಯೋಜನೆಗಾಗಿ ವಾರ್ಷಿಕ ಸುಮಾರು 30,000 ಕೋಟಿ ರೂ. ವೆಚ್ಚವಾಗಲಿದ್ದು, ಇದು ಇಡೀ ದೇಶದಲ್ಲಿಯೇ ಅತೀ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಲಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು