News Karnataka Kannada
Wednesday, May 08 2024
ಕರ್ನಾಟಕ

ನಾಡಗೀತೆ ಬಗ್ಗೆ ತಿದ್ದುಪಡಿ ಆದೇಶ ಹೊರಡಿಸಿದ ಸರ್ಕಾರ

Gvt
Photo Credit : News Kannada

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ಆ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ತಿದ್ದುಪಡಿ ಆದೇಶ ಹೊರಡಿಸಿದೆ.

ಸರ್ಕಾರದ ನಿರ್ಧಾರಕ್ಕೆ ವಿಧಾನಸಭೆ ಕಲಾಪದಲ್ಲಿಯೂ ಪ್ರತಿಪಕ್ಷಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪ್ರತಿಪಕ್ಷಗಳ ಟೀಕಾ ಪ್ರಹಾರದ ಮಧ್ಯೆ, ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೈರಾಣಾಗುವಂತಾಯಿತು.

“ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು ಎಂದು ತಿದ್ದಿ ಓದಿಕೊಳ್ಳತಕ್ಕದ್ದು” ಎಂಬುದಾಗಿ ತಿದ್ದುಪಡಿ ಆದೇಶದಲ್ಲಿ ಸರ್ಕಾರ ಉಲ್ಲೇಖಿಸಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು