ಕರ್ನಾಟಕದಲ್ಲಿ ಮತ್ತೆ ಮಳೆ ಹೆಚ್ಚಾಗುತ್ತಿದೆ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ. ಸೆಪ್ಟೆಂಬರ್ 1ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ಬಿಡುವು ಪಡೆದಿದ್ದ ಮಳೆ ಮತ್ತೆ ಶುರುವಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲೂ ಮಳೆಯಾಗಲಿದೆ. ಕ್ಯಾಸಲ್ರಾಕ್, ಅಂಕೋಲಾ, ಕೊಟ್ಟಿಗೆಹಾರ, ಕದ್ರಾ, ಗೇರುಸೊಪ್ಪ, ಸಿದ್ದಾಪುರ, ಗೋಕರ್ಣ, ಕುಮಟಾ, ಕಮ್ಮರಡಿ, ಯಲ್ಲಾಪುರ, ಮಂಕಿ, ಕಾರವಾರ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

