Bengaluru 26°C
Ad

ಸೆ. 24ರಿಂದ ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮತ್ತೆ ಮಳೆ !

Rain

ಬೆಂಗಳೂರು: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಿಂದ ಮತ್ತೆ ಮಳ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಒಣಹವೆ ಇತ್ತು. ಬೆಂಗಳೂರಿನ ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Ad
Ad
Nk Channel Final 21 09 2023