Ad

ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Rain (1)

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ.

Ad
300x250 2

ಬೆಂಗಳೂರು, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಕೊಡಗು, ಉಡುಪಿ, ಚಾಮರಾಜನಗರ, ಚಿತ್ರದುರ್ಗ, ಬೆಳಗಾವಿ, ದಾವಣಗೆರೆ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ರಾಯಚೂರು ಸೇರಿದಂತೆ, ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಕೊಪ್ಪಳ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

Ad
Ad
Nk Channel Final 21 09 2023
Ad