Bengaluru 23°C
Ad

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ

Job

ಬೆಂಗಳೂರು: ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು ಸಲಹೆಗಾರರು ಮತ್ತು ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ಮತ್ತು ವಯೋಮಿತಿ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಉದ್ಯೋಗ ವಿವರಗಳು ಇಲಾಖೆ ಹೆಸರು: ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – Karnataka State RDWSD ಒಟ್ಟು ಹುದ್ದೆಗಳು: 47 ಅರ್ಜಿ ಸಲ್ಲಿಸುವ ಬಗೆ ಆನ್​​ಲೈನ್​​​ ಮಾಹಿತಿ ಒದಗಿಸಲಾಗಿದೆ. ಉದ್ಯೋಗದ ಸ್ಥಳ -ಕರ್ನಾಟಕ. ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಆಯ್ಕೆ ವಿಧಾನ: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳ ವಿವರ: ಸಂಗ್ರಹಣೆ ಸಲಹೆಗಾರ – 9 ಹುದ್ದೆ ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ -10 ಪರಿಸರ ಸಲಹೆಗಾರ -10 ಸಾಮಾಜಿಕ ಅಭಿವೃದ್ಧಿ ಸಲಹೆಗಾರ -7 ಹಣಕಾಸು ಸಲಹೆಗಾರ -11

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, BCA, BE ಅಥವಾ B.Tech, M.Tech, MCA, MSW, MA, MBA, M.Com ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಆದ್ಯತೆ ಇರುತ್ತದೆ.

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವೇತನ ಶ್ರೇಣಿ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ.

ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ-12 ಸೆಪ್ಟೆಂಬರ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -23 ಅಕ್ಟೋಬರ್ 2024

ನೋಟಿಫಿಕೇಶನ್ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ: https://www.ksrwspdtsuonline.in/jobapplicationform

ಅರ್ಜಿ ಲಿಂಕ್ / ವೆಬ್​ಸೈಟ್​​ ಗಾಗಿ ಇಲ್ಲಿ ಕ್ಲಿಕ್ ಮಾಡಿ: https://english.swachhamevajayate.org/

Ad
Ad
Nk Channel Final 21 09 2023