ಬೆಂಗಳೂರು: ಇಂದಿನಿಂದ ಒಂದು ವಾರಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ. ಸೆಪ್ಟೆಂಬರ್ 25ನೇ ತಾರೀಕಿನಿಂದ ಅಕ್ಟೋಬರ್ 2 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲೂ ವರುಣನ ಆರ್ಭಟ ಜೋರಾಗಿ ಇರಲಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲೂ ಮಳೆ ಅಬ್ಬರ ಇರಲಿದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರೋ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ಇನ್ನು ರಾಜ್ಯದ ಕೆಲವು ಪ್ರದೇಶಗಳಲ್ಲಿ ಗುಡುಗು ಸಿಡಿಲಿನ ಸಮೇತ ಮಳೆ ಬೀಳಲಿದೆ. ಹಾಗಾಗಿ ಕಟ್ಟೆಚ್ಚರ ವಹಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಆದೇಶಿಸಿದೆ.
Ad