ಬೆಂಗಳೂರು: ಮುಂದಿನ 3 ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ವಿಜಯಪುರದಲ್ಲಿ 10.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.