ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆ, ಕರಾವಳಿ ಭಾಗಗಳಾದ ಉಡುಪಿ, ಮಂಗಳೂರು ಹಾಗೂ ಕಾರವಾರ ಭಾಗಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-19
ಮಂಗಳೂರು: 29-24
ಶಿವಮೊಗ್ಗ: 28-21
ಬೆಳಗಾವಿ: 27-20
ಮೈಸೂರು: 30-20
Ad