News Karnataka Kannada
Thursday, May 02 2024
ಬೆಂಗಳೂರು

ದರ್ಶನ್‌ ಬಳಿಕ ಕಾವೇರಿಗಾಗಿ ಧ್ವನಿ ಎತ್ತಿದ ಕಿಚ್ಚ ಸುದೀಪ್‌

Kichhha
Photo Credit : News Kannada

ಬೆಂಗಳೂರು: ಕಾವೇರಿ ನೀರಿಗಾಗಿ ತೀವ್ರ ಹೋರಾಟ ನಡೆಯುತ್ತಿರುವಾಗ ಸ್ಯಾಂಡಲ್‌ವುಡ್‌ ನಟರು ತುಟಿ ಬಿಚ್ಚುತ್ತಿಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಈ ಬಗ್ಗೆ ಪೋಸ್ಟ್ ಮಾಡಿ ಕಾವೇರಿ ಬಗ್ಗೆ ಧ್ವನಿ ಎತ್ತದ ಕನ್ನಡದ ನಟರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ನಟರಾದ ಶಿವರಾಜ್​ ಕುಮಾರ್, ಯಶ್, ಸುದೀಪ್, ದರ್ಶನ್ ಅವರ ಫೋಟೋದಲ್ಲಿ ಅವರ ಬಾಯಿಗೆ ಪಟ್ಟಿ ಹಾಕುವ ಮೂಲಕ ಗುಡುಗಿದ್ದರು.

ಈ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ ಎಂದು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿದ್ದರು.

ದರ್ಶನ್ ಪೋಸ್ಟ್ ಮಾಡಿದ ಬಳಿಕ ಸ್ಯಾಂಡಲ್‌ವುಡ್‌ ಕಿಚ್ಚ ಸುದೀಪ್‌ ಕೂಡ ಕಾವೇರಿ ಹೋರಾಟಕ್ಕೆ ಧನಿಗೂಡಿಸಿದ್ದಾರೆ. “ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು. ರಾಜ್ಯದ ಜನರು ಕಾಂಗ್ರೆಸ್ ಸರ್ಕಾರವನ್ನು ಬಹುಮತದಿಂದ ಅಧಿಕಾರಕ್ಕೆ ತಂದಿದ್ದಾರೆ. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ” ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು