Bengaluru 22°C
Ad

ತಾಯಿಯ ಕಣ್ಣೆದುರೇ ಕುಸಿದು ಬಿದ್ದು ಹೃದಯಾಘಾತದಿಂದ ನಿಲಿಕಾ ನಿಧನ

Nilika

ಮಡಿಕೇರಿ: ಕೊಡಗು ಜಿಲ್ಲೆಯ ನೆಲಜಿ ಗ್ರಾಮದಲ್ಲಿ ಯುವತಿಯೊಬ್ಬಳು ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ. ಮಡಿಕೇರಿ ತಾ| ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಎಂಬುವವರ ಪುತ್ರಿ ನಿಲಿಕಾ ಪೊನ್ನಪ್ಪ (24) ಮೃತ ಯುವತಿ.

ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ.

ಕೂಡಲೇ ಯುವತಿ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ ಅಷ್ಟೆ. ಯುವತಿ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೇ ಎಂದು ಕೇಳುವಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ತಮ್ಮ ಕಣ್ಣೆದುರೇ ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದಾರೆ.

Ad
Ad
Nk Channel Final 21 09 2023
Ad