ಕೊಡಗು: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಬಳಿ ನಡೆದಿದೆ. 4 ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಹಾಗೂ ಲಾರಿ ನಜ್ಜುಗುಜ್ಜಾಗಿದ್ದು, ಈ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ದೇಹಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

