ಕೊಡಗು: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಜೊತೆಗೆ ಗಾಳಿ ಕೂಡ ಬೀಸುತ್ತಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗಿನಾದ್ಯಂತ ವರುಣಾರ್ಭಟ ಜೋರಾಗಿದ್ದು ಇದರ ಜೊತೆಗೆ ಗಾಳಿಯು ಭಾರೀ ವೇಗದಲ್ಲಿ ಬೀಸುತ್ತಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನರಿಗೆ ಸೂಕ್ತವಾದ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಈಗಾಗಲೇ ಜಿಲ್ಲಾಡಳಿತ ಮನವಿ ಮಾಡಿದೆ.
ಬ್ರಹ್ಮಗಿರಿ ತಪ್ಪಲಿನಲ್ಲೂ ಮಳೆ ಜೋರಾಗಿ ಸುರಿಯುತ್ತಿರುವ ಕಾರಣ ಭಾಗಮಂಡಲದ ತ್ರಿವೇಣಿ ಸಂಗಮ ಕೂಡ ಭರ್ತಿಯಾಗಿದೆ.

