ಮಡಿಕೇರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಗಸ್ಟ್ 16ರಂದು ಕೊಡಗು ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ಭಾಗಮಂಡಲ ಹೆಲಿಪ್ಯಾಡ್‌ಗೆ ಆಗಮಿಸಲಿರುವ ಅವರು, ಶ್ರೀ ಭಗಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಬಳಿಕ ಪವಿತ್ರ ಕಾವೇರಿ ಉಗಮ ಸ್ಥಾನವಾದ ತಲಕಾವೇರಿಗೆ ತೆರಳಿ, ಕಾವೇರಿ ಮಾತೆಗೆ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ನೆರವೇರಿಸಲಿದ್ದಾರೆ.

ಈ ಧಾರ್ಮಿಕ ಕಾರ್ಯಕ್ರಮಗಳ ನಂತರ ಅವರು ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಸಕ ಎ.ಎಸ್. ಪೊನ್ನಣ್ಣ ಮಾಹಿತಿ ನೀಡಿದ್ದಾರೆ.

ಕಳೆದ ವರ್ಷವೂ ತಲಕಾವೇರಿಗೆ ಭೇಟಿ ನೀಡಿದ್ದ ಡಿಕೆಶಿ, ಪವಿತ್ರ ತೀರ್ಥವನ್ನು ಬೆಂಗಳೂರಿಗೆ ಕೊಂಡೊಯ್ದು ‘ಕಾವೇರಿ ಆರತಿ’ ನೆರವೇರಿಸಿದ್ದರು. ಇದೀಗ ಅವರು ಮತ್ತೆ ಕಾವೇರಿ ನಾಡಿಗೆ ಆಗಮಿಸುತ್ತಿರುವುದು ಸ್ಥಳೀಯರಲ್ಲಿ ತೀವ್ರ ಕುತೂಹಲ ಮೂಡಿಸಿದೆ.