Bengaluru 22°C
Ad

ಗ್ರಾ.ಪಂ.ಉಪಚುನಾವಣೆ: ಸಂತೆ, ಜಾತ್ರೆ, ಮದ್ಯನಿಷೇಧ

ಗ್ರಾಮ ಪಂಚಾಯಿತಿ ಉಪ ಚುನಾವಣೆ ಯ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ನೀತಿ ಸಂಹಿತೆ ಜಾರಿಯಲ್ಲಿರುವ ಸ್ಥಳಗಳಲ್ಲಿ ಸಂತೆ ಜಾತ್ರೆ, ಮದ್ಯ ಮಾರಾಟವನ್ನು ನಿಷೇಧಿಸಿ ನಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

ಮಡಿಕೇರಿ: ಗ್ರಾಮ ಪಂಚಾಯಿತಿ ಉಪ ಚುನಾವಣೆ ಯ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ನೀತಿ ಸಂಹಿತೆ ಜಾರಿಯಲ್ಲಿರುವ ಸ್ಥಳಗಳಲ್ಲಿ ಸಂತೆ ಜಾತ್ರೆ, ಮದ್ಯ ಮಾರಾಟವನ್ನು ನಿಷೇಧಿಸಿ ನಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.

Ad

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನಿಡ್ತ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಮತ್ತು ಚೆಟ್ಟಳ್ಳಿ, ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಮತ್ತು ಕುಟ್ಟ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನವೆಂಬರ್, 22 ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್, 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಸಂತೆ ಜಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Ad

ಇನ್ನೊಂದೆಡೆ ಎಲ್ಲಾ ವಿಧದ ಮದ್ಯ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Ad

ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿರುವ ಎಲ್ಲಾ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅದಿಭೋಗದಾರರು ಮತ್ತು ಸಂದರ್ಭಾನುಸಾರ ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಕೀಯನ್ನು ಜಿಲ್ಲಾಧಿಕಾರಿಗಳಿಗೆ ಅಥವಾ ಅಧಿಕಾರ ವ್ಯಾಪ್ತಿಯುಳ್ಳ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸಲು ಸೂಚಿಸಿದ್ದಾರೆ.

Ad

ಈ ಆದೇಶವು ಉಪ ಚುನಾವಣೆ ನಡೆಯುವ ಸಂಬಂಧಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನವೆಂಬರ್, 23 ರವರೆಗೆ ಅಥವಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಅನ್ವಯಿಸುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

Ad
Ad
Ad
Nk Channel Final 21 09 2023