ಕೊಡಗು: ಕೇರಳ ಮಳೆಯ ಮಧ್ಯೆ ಕೊಡಗು ಜಿಲ್ಲೆಯಲ್ಲೂ ಮತ್ತೆ ಧಾರಾಕಾರ ಮಳೆ ಬಿರುಸು ಪಡೆದುಕೊಂಡಿದೆ. ನಾಳೆ ನಾಡಿದ್ದು ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗಿನಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿರುವುದರಿಂದ ಮತ್ತೆ ಆತಂಕ ಹೆಚ್ಚಾಗಿದೆ. ಅಲ್ಲಲ್ಲಿ ಗುಡ್ಡದ ಸಣ್ಣ ಪ್ರಮಾಣದ ಮಣ್ಣು ಕುಸಿಯುತ್ತಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ವಾಹನ ಸವಾರರು ಆತಂಕದಲ್ಲಿದ್ದಾರೆ.
ಭಾರೀ ಮಳೆಯ ಜೊತೆಗೆ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದರಿಂದ ಕಾವೇರಿ ತಟದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
ಭಾಗಮಂಡಲದ ತ್ರಿವೇಣಿ ಸಂಗಮ ಕ್ಷೇತ್ರ ಮತ್ತೆ ಭರ್ತಿಯಾಗಿದೆ. ಗಾಳಿ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು. ಹಲವು ಗ್ರಾಮೀಣ ಪ್ರದೇಶಗಳು ಕತ್ತಲಲ್ಲಿ ಮುಳುಗಿವೆ.

