ಕೊಡಗು : ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ಇಂದು ಬೆಳಿಗ್ಗೆ 5.30ಕ್ಕೆ ನಡೆದಿರುವ ದುರ್ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಅಫ್ಜಲ್ ಪುರದ ಸುಷ್ಮಾ(37) ಮೃತ ಮಹಿಳೆ. ಮನೆಯೊಳಗಿದ್ದ ಮೂರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಕುಟುಂಬ ಬಂದಿತ್ತು.
ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

