ಕೊಡಗು : ಜಿಲ್ಲೆಯ 104 ಪ್ರದೇಶಗಳಿಗೆ ಭೂಕುಸಿತ ಮತ್ತು ಪ್ರವಾಹ ಆಗುತ್ತದೆ ಎನ್ನುವ ಎಚ್ಚರಿಕೆ ನೀಡಿರುವುದು. ಭೂಕುಸಿತ ಮತ್ತು ಪ್ರವಾಹ ಎದುರಾಗುವುದರಿಂದ ಆ ಪ್ರದೇಶಗಳ 2995 ಕುಟುಂಬಗಳನ್ನು ಸ್ಥಳಾಂತರ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಬೆಟ್ಟಗುಡ್ಡ ಹಾಗೂ ನದಿ ಪಾತ್ರದ ಗ್ರಾಮಗಳಿಗೆ ಭಾರತೀಯ ಭೂಗರ್ಭ ಶಾಸ್ತ್ರ ಇಲಾಖೆ ಎಚ್ಚರಿಕೆ ನೀಡಿದೆ. ಕೇರಳದ ವಯನಾಡಿನಲ್ಲಿ ಮಹಾಭೂಕುಸಿತ ಆಗುತ್ತಿದ್ದಂತೆ ಕೊಡಗಿಗೆ ಇಂತಹ ಎಚ್ಚರಿಕೆಯನ್ನು ನೀಡಿದೆ. ಕೊಡಗಿನ 5 ತಾಲ್ಲೂಕುಗಳ 104 ಪ್ರದೇಶಗಳಿಗೆ ಭೂಕುಸಿತ ಪ್ರವಾಹವಾಗುವ ಸಾಧ್ಯತೆ ಇರುವುದರಿಂದ ಅಲ್ಲಿನ 2995 ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆಯನ್ನು ನೀಡಿದೆ. ಇಂತಹ ವರದಿ ದೊರೆಯುತ್ತಿದ್ದಂತೆ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ನೀಡಿರುವ ಸಲಹೆಯನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಕಂದಾಯ ಸಚಿವ ಕೃಷ್ಣೆಬೈರೆಗೌಡ ಕೊಡಗು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
Ad